ಹಲ್ಲೆಗೊಳಗಾದ ವಿದ್ವತ್ ನಮ್ಮ ಕಾರ್ಯಕರ್ತ: ಬಿಜೆಪಿ ಅಧ್ಯಕ್ಷ ಅಮಿತ್ ಶಾ
ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ನಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಬೆಂಗಳೂರಿನ ಮಲ್ಯ....

Published On :
ಮಂಗಳೂರು: ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ನಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಬೆಂಗಳೂರಿನ ಮಲ್ಯ ಆಸ್ಪೆತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ವತ್ ನಮ್ಮ ಕಾರ್ಯಕರ್ತ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಮಂಗಳವಾರ ಹೇಳಿದ್ದಾರೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಸಮೀಪದ ಕುಲ್ಕುಂದದಲ್ಲಿ ನವಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಶಾಸಕನ ಪುತ್ರ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಶಾಸಕನ ಪುತ್ರ ಅಲ್ಪ ಸಂಖ್ಯಾತ ಎಂಬ ಕಾರಣಕ್ಕೆ ಆತನ ವಿರುದ್ಧ ಎಫ್ಐಆರ್ ದಾಖಲಿಸಲು ಹಿಂದೇಟು ಹಾಕಿದ್ದರು ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಓಲೈಕೆ ರಾಜಕಾರಣ ಯಶಸ್ವಿಯಾಗುವುದಿಲ್ಲ. ಅವರ ಓಲೈಕೆ ಮತ್ತು ಧ್ರುವೀಕರಣ ರಾಜಕಾರಣವನ್ನು ಎನ್.ಎ.ಹ್ಯಾರಿಸ್ ಮಗನ ಪ್ರಕರಣದಲ್ಲಿ ಗಮನಿಸಬಹುದು. ಎಮ್ಎಲ್ಎ ಮಗನೊಬ್ಬ ಓರ್ವನ ಮೇಲೆ ಹಲ್ಲೆ ಮಾಡಿದರೂ ಯಾವುದೇ ಎಫ್ಐಆರ್ ದಾಖಲಾಗಿಲ್ಲ. ಯಾಕೆ? ಎಂದು ಪ್ರಶ್ನಿಸಿದರು. ಹ್ಯಾರಿಸ್ ಮಗ ಎಂಬ ಕಾರಣಕ್ಕೆ ಮಾತ್ರವಲ್ಲ ಒಂದು ಸಮುದಾಯವನ್ನು ಓಲೈಕೆ ಮಾಡಲು ಅವರು ಹೀಗೆ ಮಾಡಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


