ಸಿದ್ದರಾಮಯ್ಯ ಸರ್ಕಾರ ಕಿತ್ತೊಗೆಯುವ ಕಾಲ ಸನ್ನಿಹಿತ: ಅಮಿತ್ ಶಾ
ಕರ್ನಾಟಕ ಜನತೆಯ ಸಿಟ್ಟು, ಆಕ್ರೋಶಗಳನ್ನು ಬೇರೆಡೆಗೆ ಹರಿಸಿ ಸಿದ್ದರಾಮಯ್ಯ ಸರ್ಕಾರವನ್ನು....

ಉಡುಪಿ: ಕರ್ನಾಟಕ ಜನತೆಯ ಸಿಟ್ಟು, ಆಕ್ರೋಶಗಳನ್ನು ಬೇರೆಡೆಗೆ ಹರಿಸಿ ಸಿದ್ದರಾಮಯ್ಯ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ಇದು ಸರಿಯಾದ ಸಂದರ್ಭ. ಬಿಜೆಪಿ ಸರ್ಕಾರವನ್ನು ಕರ್ನಾಟಕ ರಾಜ್ಯದಲ್ಲಿ ತರಲು ಇದೊಂದು ಸೂಕ್ತ ಸಂದರ್ಭವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಉಡುಪಿಯಲ್ಲಿಂದು ಸಾಮಾಜಿಕ ಮಾಧ್ಯಮ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಕರ್ನಾಟಕದ ಜನತೆಯ ಆಕ್ರೋಶ ಮುಗಿಲು ಮುಟ್ಟಿದೆ. ಅವರ ಈ ಆಕ್ರೋಶವನ್ನು ಮತಗಳನ್ನಾಗಿ ಪರಿವರ್ತಿಸಿ ಕಾಂಗ್ರೆಸ್ಸನ್ನು ಕಿತ್ತೆಸೆಯುವ ಕಾಲ ಸಮೀಪಿಸಿದೆ. ಬಿಜೆಪಿ ಚುನಾವಣೆಗಳ ಜೊತೆ ಜನರ ಮನಸ್ಸನ್ನು ಕೂಡ ಗೆಲ್ಲುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ನಂತೆ ನಾವು ಚುನಾವಣೆಯನ್ನು ಗೆಲ್ಲಲು ಅಡ್ಡದಾರಿ ಹಿಡಿಯುವುದಿಲ್ಲ, ನಾವು ಕಷ್ಟಪಟ್ಟು ಕೆಲಸ ಮಾಡುತ್ತೇವೆ. ಜನರನ್ನೆಲ್ಲಾ ಒಗ್ಗೂಡಿಸಿ ಏಕತೆಯ ಮಂತ್ರವನ್ನು ಜಪಿಸುತ್ತೇವೆ. ಬಿಜೆಪಿ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತಿದೆ. ಇದರಿಂದಾಗಿ ಚುನಾವಣೆಯಿಂದ ಚುನಾವಣೆಗೆ ಬಿಜೆಪಿ ಗೆಲ್ಲುತ್ತಾ ಬಂದಿದೆ ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಕರ್ನಾಟಕಕ್ಕೆ ಆ ಬಚ್ಚನಾದ ರಾಹುಲ್ ಗಾಂಧಿಯನ್ನು ಕರೆತಂದು ಕಾಂಗ್ರೆಸ್ ನವರು ತಪ್ಪು ಮಾಡಿದ್ದಾರೆ. ನಮಗೆ ಅನುಕೂಲವಾಯಿತು. ಬಿಜೆಪಿ 150 ಸೀಟುಗಳಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದಕ್ಕೂ ಮುನ್ನ ಅಮಿತ್ ಶಾ ಅವರು ಬಿ.ಎಸ್.ಯಡಿಯೂರಪ್ಪ ಮತ್ತು ಇತರ ನಾಯಕರೊಂದಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಪರ್ಯಾಯ ಪಾಲಿಮಾರು ಮಠದ ವಿದ್ಯಾದೀಶ ತೀರ್ಥ ಸ್ವಾಮೀಜಿ, ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲು ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಇದಕ್ಕೂ ಮುನ್ನ ಅಮಿತ್ ಶಾ ಪಾಲಿಮಾರು ಮಠದ ಹತ್ತಿರ ರಾಜಾಂಗನ ಪಾರ್ಕಿಂಗ್ ಪ್ರದೇಶದ ಹತ್ತಿರ ರಾಮದಾಮ ವಾಣಿಜ್ಯ ಮತ್ತು ವಸತಿ ಸಂಕೀರ್ಣವನ್ನು ಉದ್ಘಾಟಿಸಿದರು.
ಉಡುಪಿ ಮಠಕ್ಕೆ ಭೇಟಿ ನೀಡಿರುವುದು ಮನಸ್ಸಿಗೆ ತುಂಬಾ ಖುಷಿಯಾಗಿದೆ. ನಾನು ಕೃತಜ್ಞ ಎಂದು ಶಾ ಪ್ರತಿಕ್ರಿಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


