ರಾಜಕೀಯ

ಬಂಡಾಯ ಶಾಸಕರು ಜೆಡಿಎಸ್ ಗೆ ದೊಡ್ಡ ಸಮಸ್ಯೆ ಅಲ್ಲ: ಎಚ್.ಡಿ ಕುಮಾರಸ್ವಾಮಿ

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಈಗಾಗಲೇ ಮೊದಲ ಸುತ್ತಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಹೊಸ ಚುನಾವಣಾ ತಂತ್ರಗಾರಿಕೆ ,...

ಬಂಡಾಯ ಶಾಸಕರು ಜೆಡಿಎಸ್ ಗೆ ದೊಡ್ಡ ಸಮಸ್ಯೆ ಅಲ್ಲ: ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರ ಸ್ವಾಮಿ
Published On :
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಈಗಾಗಲೇ ಮೊದಲ ಸುತ್ತಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಹೊಸ ಚುನಾವಣಾ ತಂತ್ರಗಾರಿಕೆ ಕಡೆ ಗಮನ ಕೇಂದ್ರೀಕರಿಸುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಕರೆ ನೀಡಿದ್ದಾರೆ.
ಎರಡನೇ ಹಂತದಲ್ಲಿ ಮತ್ತಷ್ಟು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗಾಗಿ ತಯಾರಿ ನಡೆಸುತ್ತಿದ್ದು, ಸಾರ್ವಜನಿಕರಿಗೆ ಹತ್ತಿರವಾಗಲು ಅಭ್ಯರ್ಥಿಗಳು ಸಾಮಾಜಿಕ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ.
ಇನ್ನು ಚುನಾವಣಾ ಪ್ರಚಾರಕ್ಕಾಗಿ 100 ಎಲ್ ಇಡಿ ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಈ ವಾಹನಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪಕ್ಷಗಳಿಗೆ ಜೆಡಿಎಸ್ ಪರ್ಯಾಯವಾಗಿದೆ ಎಂಬ ಸಂದೇಶವನ್ನು ರಾಜ್ಯ ಎಲ್ಲಾ  ಕ್ಷೇತ್ರದ ಜನರಿಗೆ ತಿಳಿಸಲಾಗುತ್ತದೆ ಎಂದರು.
ಇನ್ನೂ ಪಕ್ಷದ ವಿರುದ್ಧ ಬಂಡಾಯ ಸಾರಿರುವ ಶಾಸಕರು ಜೆಡಿಎಸ್ ಗೆ ದೊಡ್ಡ ಸಮಸ್ಯೆ ಅಲ್ಲ, ಬಲವಂತವಾಗಿ ಅವರ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುವುದರಿಂದ ಯಾವುದೇ ಫಲಿತಾಂಶ ದೊರೆಯವುದಿಲ್ಲ ಎಂದು ಹೇಳಿದ್ದಾರೆ.
ಚಲನಚಿತ್ರ ನಿರ್ದೇಶಕ ಎಸ್‌.ಮಹೇಂದರ್‌ ಜೆಡಿಎಸ್‌ ಸೇರ್ಪಡೆಯಾದರು. ಪಕ್ಷದ ಬಾವುಟ ನೀಡಿ ಸ್ವಾಗತಿಸಿದ ಕುಮಾರಸ್ವಾಮಿ, ‘ಮಹೇಂದ್ರ ನಿರ್ದೇಶಿಸಿದ್ದ ಹಲವು ಚಲನಚಿತ್ರಗಳನ್ನು ಹಿಂದೆ ವಿತರಣೆ ಮಾಡಿದ್ದೆ. ರಾಜ್ಯದ ಹಿತದೃಷ್ಟಿಯಿಂದ ಜೆಡಿಎಸ್‌ ಗೆಲ್ಲಿಸಬೇಕು ಎಂಬ ಕಾರಣಕ್ಕೆ ಪಕ್ಷ ಸೇರುತ್ತಿದ್ದಾರೆ ಎಂದರು. 
ಬೆಂಗಳೂರು ನಗರದ ಬಿಪಿಎಲ್‌ ಕುಟುಂಬದವರಿಗೆ ಅವರ ಮನೆ ಬಾಗಿಲಿನಲ್ಲೇ ಆರೋಗ್ಯ ಸೇವೆ ನೀಡುವ ‘ಕುಮಾರ ರಕ್ಷಾ ಜನಸೇವಾ ವಾಹನ’ಕ್ಕೆ ಎಚ್‌.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.