ಮಹಿಳಾ ಉದ್ಯಮಿಗಳಿಗೆ ಕೈಗಾರಿಕಾ ಪಾರ್ಕ್ ಸ್ಥಾಪಿಸಿದ ಮೊದಲ ರಾಜ್ಯ ಕರ್ನಾಟಕ: ರಾಹುಲ್ ಗಾಂಧಿ
ಮಹಿಳಾ ಉದ್ಯಮಿಗಳಿಗೆ ಕೈಗಾರಿಕಾ ಪಾರ್ಕ್ ಸ್ಥಾಪಿಸಿದ ಮೊದಲ ರಾಜ್ಯ ಕರ್ನಾಟಕ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಬೆಳಗಾವಿ: ಮಹಿಳಾ ಉದ್ಯಮಿಗಳಿಗೆ ಕೈಗಾರಿಕಾ ಪಾರ್ಕ್ ಸ್ಥಾಪಿಸಿದ ಮೊದಲ ರಾಜ್ಯ ಕರ್ನಾಟಕ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಎರಡನೇ ಹಂತದ "ಜನಾಶೀರ್ವಾದ ಯಾತ್ರೆ" ಯ ಹಿನ್ನಲೆ ಕರ್ನಾಟಕ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರವರು ಇಂದು ಅಥಣಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಕರ್ನಾಟಕಸರ್ಕಾರ ಸ್ಪಂದಿಸಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ಹಾಗೂ ಅಂಗನವಾಡಿ ಸಹಾಯಕಿಯರಿಗೆ 1 ಸಾವಿರ ರೂಪಾಯಿ ಗೌರವ ಧನ ಹೆಚ್ಚಿಸಿದೆ. ಇದರಿಂದಾಗಿ1 ಕೋಟಿ 2 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು.
ಬಸವಣ್ಣನವರು ಹೇಳಿದಂತೆ ಕಾಯಕವೇ ಕೈಲಾಸ, ಹಾಗೂ ಸಮಾನತೆ ತತ್ವದಂತೆ ಕರ್ನಾಟಕ ಸರ್ಕಾರ ಕಾರ್ಯಪ್ರವೃತ್ತವಾಗಿದ್ದು, ಕರ್ನಾಟಕ ಮಹಿಳೆಯರ ಅಭಿವೃದ್ದಿಯಲ್ಲಿ ಉಳಿದೆಲ್ಲಾ ರಾಜ್ಯಗಳಿಗಿಂತ ಮುಂದಿದೆ ಎಲ್ಲರಿಗೂ ಸಮಾನ ಅವಕಾಶ ಒದಗಿಸುವಲ್ಲಿ ನಾವು ಬದ್ಧರಾಗಿರುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಅಕ್ಕಮಹಾದೇವಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ನಾವು ಪ್ರಾರಂಭಿಸಿದ್ದೇವು. ಬಿಜೆಪಿ ನಾಯಕರು ಮಾತನಾಡುತ್ತಾರೆ ವಿನಹ ಏನೂ ಮಾಡುವುದಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದರು.
ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಐಸಿಸಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


