ಸಾರ್ವಜನಿಕ ಹಣ ಲೂಟಿ ಮಾಡಿ ನೀರವ್ ಮೋದಿ ದೇಶ ಬಿಟ್ಟು ಹೇಗೆ ಹೋದರು ಎಂದು ನರೇಂದ್ರ ಮೋದಿ ವಿವರಿಸಬೇಕು: ರಾಹುಲ್ ಗಾಂಧಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...

ಮುಧೋಳ: ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಾರ್ವಜನಿಕ ಹಣವನ್ನು ಲೂಟಿ ಮಾಡಿದ ನಂತರ ತನ್ನ ಮೂಗಿನ ನೇರಕ್ಕೆ ಉದ್ಯಮಿ ನೀರವ್ ಮೋದಿ ದೇಶ ಬಿಟ್ಟು ಹೋದರು ಎಂಬುದನ್ನು ಈ ದೇಶದ ಪ್ರಧಾನ ಸೇವಕರಾಗಿರುವ ಪ್ರಧಾನಿ ನರೇಂದ್ರ ಮೋದಿ ವಿವರಿಸಬೇಕು ಎಂದು ಹೇಳಿದರು.
ಜನಾಶೀರ್ವಾದ ಯಾತ್ರೆಯ ಎರಡನೇ ದಿನ ಅವರು ನಿನ್ನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ ಮಾತನಾಡಿ, ಮೋದಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿಲ್ಲ ಎಂದು ಆರೋಪಿಸಿದರು.
ಕೋಟ್ಯಂತರ ರೂಪಾಯಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ ನೀರವ್ ಮೋದಿ ತಮ್ಮಿಚ್ಛೆಯಂತೆ ದೇಶ ಬಿಟ್ಟು ಹೋದರು ಎಂಬುದನ್ನು ಪ್ರಧಾನಿ ಮೋದಿಯವರು ವಿವರಿಸಬೇಕು ಎಂದರು.
12ನೇ ಶತಮಾನದ ಸಮಾಜ ಸುಧಾರಕ, ಕ್ರಾಂತಿಕಾರ ಬಸವಣ್ಣನವರ ವಚನಗಳ ಮೂಲಕ ಮೋದಿ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಬಸವಣ್ಣನವರ ನುಡಿದಂತೆ ನಡೆ ಮತ್ತು ಕಾಯಕವೇ ಕೈಲಾಸ ವಚನಗಳನ್ನು ಪ್ರಸ್ತಾಪಿಸಿದರು.
ಕಾರ್ಪೊರೇಟ್ ಉದ್ಯಮಿಗಳ ಪರವಾಗಿ ಮೋದಿ ಸರ್ಕಾರವಿದೆ ಎಂದು ಹರಿಹಾಯ್ದ ಅವರು, ಕೈಗಾರಿಕೋದ್ಯಮಿಗಳ 1.4 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡುವುದರಲ್ಲಿ ಮೋದಿ ಸರ್ಕಾರಕ್ಕೆ ಯಾವುದೇ ಸಮಸ್ಯೆಯುಂಟಾಗಲಿಕ್ಕಿಲ್ಲ. ಅದೇ ರೈತರ ಸಾಲ ಮನ್ನಾ ಮಾಡುವುದೆಂದರೆ ದೇಶದ ಆರ್ಥಿಕತೆಗೆ ಹೊಡೆತ ಬೀಳಬಹುದು ಎಂದು ಭಾವಿಸಬಹುದು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


