ರಾಜಕೀಯ

ಮುಖ್ಯಮಂತ್ರಿಗಳ ಸಭೆ ಕರೆದು ಮಹದಾಯಿ ವಿವಾದ ಬಗೆಹರಿಸಿ: ಪ್ರಧಾನಿಗೆ ರಾಹುಲ್ ಗಾಂಧಿ ಒತ್ತಾಯ

ಮಹದಾಯಿ ನದಿ ನೀರು ಹಂಚಿಕೆ ಕುರಿತು ಕರ್ನಾಟಕ ಮತ್ತು ಗೋವಾ ನಡುವಿನ ವಿವಾದವನ್ನು ಬಗೆಹರಿಸಲು....

ಮುಖ್ಯಮಂತ್ರಿಗಳ ಸಭೆ ಕರೆದು ಮಹದಾಯಿ ವಿವಾದ ಬಗೆಹರಿಸಿ: ಪ್ರಧಾನಿಗೆ ರಾಹುಲ್ ಗಾಂಧಿ ಒತ್ತಾಯ
ಹುಬ್ಬಳ್ಳಿಯಲ್ಲಿ ಮಹಿಳಾ ಕಾರ್ಮಿಕರೊಂದಿಗೆ ಮಾತನಾಡಿ ಅವರ ಸಮಸ್ಯೆ ಆಲಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
Published On :

ಹುಬ್ಬಳ್ಳಿ: ಮಹದಾಯಿ ನದಿ ನೀರು ಹಂಚಿಕೆ ಕುರಿತು ಕರ್ನಾಟಕ ಮತ್ತು ಗೋವಾ ನಡುವಿನ ವಿವಾದವನ್ನು ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನಿನ್ನೆ ಹುಬ್ಬಳ್ಳಿಯಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಮಹದಾಯಿ  ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಪ್ರಧಾನಮಂತ್ರಿಯವರು ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯವ ಜವಾಬ್ದಾರಿ ವಹಿಸಬೇಕೆಂದು ಒತ್ತಾಯಿಸಿದರು.
ಗುಜರಾತ್ ನಲ್ಲಿ ಬಿಜೆಪಿ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತದ ಸರ್ಕಾರಗಳ ನಡುವೆ ಹೋಲಿಕೆ ಮಾಡಿದ ಅವರು, ಅಭಿವೃದ್ಧಿಪರ ಕೆಲಸಗಳನ್ನು ಜಾರಿಗೆ ತರುವಲ್ಲಿ ಕರ್ನಾಟಕ ಮುಂದಿದೆ. ಸ್ನಾತಕೋತ್ತರ ಪದವಿಯವರೆಗೆ ಹೆಣ್ಣುಮಕ್ಕಳಿಗೆ ಕರ್ನಾಟಕದಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ, ಗುಜರಾತ್ ನಲ್ಲಿ ಮಾತ್ರ ಶಿಕ್ಷಣ ಬೇಕೆಂದರೆ ಒಂದು ಮಗುವಿಗೆ 15 ಲಕ್ಷ ನೀಡಬೇಕು. ಇಲ್ಲಿ ಆರೋಗ್ಯಸೇವೆ ಅಗ್ಗದ ದರದಲ್ಲಿ ದೊರೆಯುತ್ತದೆ. ಆದರೆ ಗುಜರಾತ್ ನಲ್ಲಿ ಆರೋಗ್ಯ ವಲಯವನ್ನು ಖಾಸಗೀಕರಣಗೊಳಿಸಲಾಗಿದ್ದು ಆರೋಗ್ಯ ಸೇವೆ ದೊರಕಬೇಕೆಂದರೆ ದುಬಾರಿ ಮೊತ್ತ ನೀಡಬೇಕಾಗಿದೆ ಎಂದು ಟೀಕಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಜನತೆಗೆ ನೀಡಿದ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಿದೆ. 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ತತ್ವಗಳನ್ನು ಈ ಸರ್ಕಾರ ಅನುಸರಿಸುತ್ತಿದೆ. ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದವರು. ಆದರೆ ಮೋದಿ ಸರ್ಕಾರ ಜನರಿಗೆ ದೊಡ್ಡ ದೊಡ್ಡ ಭರವಸೆಗಳನ್ನು ನೀಡುವುದರಲ್ಲಿ ನಂಬಿಕೆಯನ್ನಿಟ್ಟುಕೊಂಡಿದೆ. ಮೋದಿ ಸರ್ಕಾರ ಮಾತುಗಳಲ್ಲಿ ಮಗ್ನವಾಗಿದ್ದರೆ ಸಿದ್ದರಾಮಯ್ಯ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಟೀಕಿಸಿದ ರಾಹುಲ್ ಗಾಂಧಿ, ಈ ಸಂದರ್ಭದಲ್ಲಿ ದೇಶದ ಬಗ್ಗೆ ತಮ್ಮ ದೃಷ್ಟಿಕೋನವನ್ನು ವಿವರಿಸಿದರು. ತಮಗೆ ಆಳ್ವಿಕೆ ನಡೆಸಲು ಅವಕಾಶ ನೀಡಿದರೆ ದೇಶದಲ್ಲಿ ಖಂಡಿತವಾಗಿಯೂ ಬದಲಾವಣೆ ತರುವುದಾಗಿ ಆಶ್ವಾಸನೆ ನೀಡಿದರು.

ಇಂದು ನಿಮಗೆ ಚೀನಾದಲ್ಲಿ ತಯಾರಾದ ಮೊಬೈಲ್ ಬ್ರಾಂಡ್ ಗಳು ಸಿಗುತ್ತಿವೆ. ಅದನ್ನು ನಾನು ಬದಲಾಯಿಸಬೇಕು. ಮುಂದಿನ ಒಂದು ದಶಕದಲ್ಲಿ ಭಾರತದ್ಲಲಿ ಮೊಬೈಲ್ ಉತ್ಪಾದನೆಯಾಗಬೇಕು. ಮೋದಿ ಸರ್ಕಾರ ವೈಫಲ್ಯ ಕಂಡಿರುವ ಯುವಜನತೆಗೆ ಉದ್ಯೋಗ ಒದಗಿಸಿಕೊಡುವ ಭರವಸೆಯನ್ನು ಕಾಂಗ್ರೆಸ್ ಗೆ ಅಧಿಕಾರ ನೀಡಿದರೆ ಈಡೇರಿಸುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.