ಕರ್ನಾಟಕ: ಹಾಲಿ ರಾಜ್ಯಸಭಾ ಸದಸ್ಯರಿಗೆ ಮತ್ತೊಂದು ಅವಕಾಶ ಇಲ್ಲ
ರಾಜ್ಯದ ನಾಲ್ಕು ರಾಜ್ಯಸಭಾ ಸದಸ್ಯರ ಅವಧಿ ಮುಗಿದಿದ್ದು. ತೆರವಾಗಲಿರುವ ಸ್ಥಾನಕ್ಕೆ ಸದಸ್ಯರನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗ ರಾಜಸಭೆ .,..

Published On :
ಬೆಂಗಳೂರು: ರಾಜ್ಯದ ನಾಲ್ಕು ರಾಜ್ಯಸಭಾ ಸದಸ್ಯರ ಅವಧಿ ಮುಗಿದಿದ್ದು. ತೆರವಾಗಲಿರುವ ಸ್ಥಾನಕ್ಕೆ ಸದಸ್ಯರನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗ ರಾಜಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ಮಾರ್ಚ್ 23 ರಂದು ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಹಾಲಿ ರಾಜ್ಯಸಭೆ ಸದಸ್ಯರಿಗೆ ಅವಕಾಶ ನೀಡಲು ಮೂರು ಪಕ್ಷಗಳು ನಿರ್ದರಿಸಿವೆ.
ಪ್ರಸಕ್ತ ರಾಜ್ಯಸಭೆ ಸದಸ್ಯರಾಗಿರುವ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಬದಲಾಯಿಸಿಕೊಳ್ಳುವ ಸಾಧ್ಯತೆಯಿದೆ.
ಕಾಂಗ್ರೆಸ್ ನ ಕೆ.ರೆಹಮಾನ್ ಖಾನ್, ಬಸವರಾಜ್ ಪಾಟೀಲ್ ಸೇಡಂ ಮತ್ತು ಬಿಜೆಪಿಯ ರಾಮಕೃಷ್ಣ ಹಾಗೂ ಸ್ವತಂತ್ರ್ಯ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರ ರಾಜ್ಯಸಭೆ ಸದಸ್ಯತ್ವ ಏಪ್ರಿಲ್ 2 ಕ್ಕೆ ಅಂತ್ಯಗೊಳ್ಳಲಿದೆ.
ಸದ್ಯ ಬಿಜೆಪಿಗೆ 45 ಶಾಸಕರ ಬೆಂಬಲ ಇರುವ ಕಾರಣ ಕೇವಲ ಒಬ್ಬ ಆಭ್ಯರ್ಥಿಯನ್ನು ಮಾತ್ರ ಬಿಜೆಪಿ ರಾಜ್ಯಸಭೆಗೆ ಕಳುಹಿಸಬಹುದು ಎಂದು ಬಿಜೆಪಿ ಮುಖಂಡರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ, ಆಡಳಿತಾರೂಢ ಕಾಂಗ್ರೆಸ್ ನಲ್ಲಿ 123 ಸದಸ್ಯರಿದ್ದಾರೆ, ಹೀಗಾಗಿ ಮೊದಲ ಎರಡು ಅಭ್ಯರ್ಥಿಗಳ ಆಯ್ಕೆ ಸುಲಭವಾಗಿದೆ, ಮೂರನೇ ಅಭ್ಯರ್ಥಿ ಆಯ್ಕೆಗಾಗಿ ಜೆಡಿಎಸ್ ನ ಬಂಡಾಯ ಶಾಸಕರ ಬೆಂಬಲ ಪಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ. ರಾಜ್ಯಸಭೆಗೆ ಆಯ್ಕೆಯಾಗುವ ಪ್ರತಿ ಅಭ್ಯರ್ಥಿಗೆ 45 ಶಾಸಕರು ಮತ ಚಲಾಯಿಸಬೇಕಿದೆ.
ಜೆಡಿಎಸ್ ಗೆ 15 ಮತಗಳ ಕೊರತೆಯಿದ್ದು, ಇದಕ್ಕಾಗಿ ಕಾಂಗ್ರೆಸ್ ಸಹಾಯ ಕೇಳುವ ಸಾಧ್ಯತೆಯಿದೆ, ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಅವಶ್ಯಕತೆ ಬಂದರೆ ಜೆಡಿಎಸ್ ಕಾಂಗ್ರೆಸ್ ಗೆ ಬೆಂಬಲ ಕೋರುವ ಸಾಧ್ಯತೆಯಿದೆ.
ತನ್ನ ಮೂರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಭರವಸೆಯಲ್ಲಿ ಕಾಂಗ್ರೆಸ್ ಇದೆ, ಮೂರು ಅಭ್ಯರ್ಥಿಗಳು ಆಯ್ಕೆಯಾಗಲಿದ್ದು, ಯಾರದೇ ಬೆಂಬಲ ನಮಗೆ ಅವಶ್ಯಕತೆಯಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದ್ದಾರೆ.
ಕಾಂಗ್ರೆಸ್ ನ ರೆಹಮಾನ್ ಖಾನ್ ಬದಲು ಯುವಕರಿಗೆ ಆದ್ಯತೆ ನೀಡಲು ಪಕ್ಷ ನಿರ್ಧರಿಸಿದೆ ಎನ್ನಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರ ಸ್ವಾಮಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಎಚ್ .ಡಿ ದೇವೇಗೌಡ ಚರ್ಚೆ ನಡೆಸಿ ತನ್ನ ಅಭ್ಯರ್ಥಿಯನ್ನು ಶೀಘ್ರವೇ ಘೋಷಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


