ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆಗೆ ಬರಲಿ: ದೇವೇಗೌಡ
ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದ್ದ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರು ಇದೀಗ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ...

Published On :
ಮೈಸೂರು: ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದ್ದ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರು ಇದೀಗ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಯಾವುದೇ ಜನಪರ ಯೋಜನೆಗಳನ್ನು ಕೈಗೊಂಡಿರಲಿಲ್ಲ ಎಂದು ಇತ್ತೀಚೆಗಷ್ಟೇ ಸಿದ್ದರಾಮಯ್ಯ ಹೇಳಿದ್ದರು. ಈ ಹೇಳಿಕೆಗೆ ತೀವ್ರವಾಗಿ ಕಿಡಿಕಾಡಿರುವ ದೇವೇಗೌಡ ಅವರು, ಸಿದ್ದರಾಮಯ್ಯ ಅವರ ಹೇಳಿಗೆ ಬೇಜಬ್ದಾರಿತನದ್ದಾಗಿದ್ದು, ಹೇಳಿಕೆ ನೀಡುವಾಗ ಸಿದ್ದರಾಮಯ್ಯ ಅವರಿಗೆ ಮಾತಿನ ಮೇಲಿ ಹಿಡಿತವಿರಬೇಕು. ತಾಳ್ಮೆಗೂ ಒಂದು ಮಿತಿಯಿದೆ. ಸಹನೆ ಮೀರಿದರೆ ಅದರ ಪರಿಣಾಮವೇ ಬೇರೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಮ್ಮ ಪಕ್ಷ ರಾಜ್ಯದ ಜನತೆಗೆ ನೀಡಿರುವ ಕೊಡುಗೆಗಳ ಕುರಿತಂತೆ ಚರ್ಚೆ ನಡೆಸಲು ಸಿದ್ಧವಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಚರ್ಚೆಗೆ ಬರಲಿ ಎಂದು ಆಹ್ವಾನಿಸಿದ್ದಾರೆ.
ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರು ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದು, ನಂಜನಗೂಡು ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಹಿರಿಯ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


