ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಧರ್ಮ: ಬಿಎಸ್ ಯಡಿಯೂರಪ್ಪ
ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಧರ್ಮ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ....

Published On :
ದಾವಣಗೆರೆ: ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಧರ್ಮ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ರಾಜ್ಯದಲ್ಲಿ ಹೋರಾಟ ನಡೆಯುತ್ತಿರುವ ವೇಳೆ ಹುಟ್ಟಿಕೊಂಡಿರುವ ಲಿಂಗಾಯತ-ವೀರಶೈವ ಕುರಿತಾಗಿನ ಗೊಂದಲಗಳ ಬಗ್ಗೆ ನಿನ್ನೆ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಈ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
'ಲಿಂಗಾಯತ -ವೀರಶೈವ ಎರಡೂ ಒಂದೇ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿರುವ ಶಾಮನೂರು ಶಿವಶಂಕರಪ್ಪ ಅವರು ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದು, ಇದನ್ನು ಅನೇಕ ಬಾರಿ ಸ್ಪಷ್ಟ ಮಾಡಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ,ಎಂದರು.
'ನಡೆದಾಡುವ ದೇವರು ಶಿವಕುಮಾರ ಶ್ರೀಗಳು ಈಗಾಗಲೇ ಎರಡೂ ಒಂದೇ ಎನ್ನುವುದನ್ನು ಸ್ಪಷ್ಟ ಮಾಡಿದ್ದಾರೆ.ಇದರಲ್ಲಿ ಯಾವುದೇ ಗೊಂದಲವಿಲ್ಲ'. 'ಬಸವರಾಜ ಹೊರಟ್ಟಿಯವರು ಸ್ವಾರ್ಥಕ್ಕಾಗಿ ಹೋರಾಟ ಮಾಡುತ್ತಿದ್ದಾರೆ' ಎಂದು ಯಡಿಯೂರಪ್ಪ ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


