ಬಿಜೆಪಿ-ಪಿಎಫ್ಐ ಹೊಂದಾಣಿಕೆ ಸಾಬೀತುಪಡಿಸಲಿ: ರಾಮಲಿಂಗಾ ರೆಡ್ಡಿಗೆ ಬಿಎಸ್ ವೈ ಸವಾಲು
ಬಿಜೆಪಿಯೇ ಪಿಎಫ್‌ಐ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದು....

Published On :
ಬಳ್ಳಾರಿ: ಬಿಜೆಪಿಯೇ ಪಿಎಫ್‌ಐ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದು, ಅವರು 24 ಗಂಟೆಯೊಳಗೆ ಅದನ್ನು ಸಾಬೀತು ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಸವಾಲು ಹಾಕಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಎಸ್ ವೈ, ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮೂವರು ಮುಖಂಡರ ಕೈವಾಡವಿದೆ ಎಂಬುದು ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ನ್ಯಾಯ ದೊರಕಿಸಿಕೊಡುವುದಿಲ್ಲ ಎಂಬ ಕಾರಣಕ್ಕೆ ರಾಜ್ಯದ ಸಂಸದರು ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಮಹಾದಾಯಿ ವಿಚಾರದಲ್ಲಿ ಸಿಎಂ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಕುಡಿಯುವ ಸಲುವಾಗಿ ನೀರು ಕೊಡಲು ಸಿದ್ದ ಎಂಬ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೇಳಿಕೆಯನ್ನು ವಿರೋಧಿಸಿದ ಅಲ್ಲಿನ ಕಾಂಗ್ರೆಸ್ ಮುಖಂಡರ ಬಾಯಿ ಮುಚ್ಚಿಸದೇ ಸಿದ್ದರಾಮಯ್ಯ ಸುಮ್ಮನಿದ್ದುದು ಏಕೆ? ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


