ರಾಜಕೀಯ

ಮನುಷ್ಯತ್ವದ ಬಗ್ಗೆ ನಾವು ಬಿಜೆಪಿಯಿಂದ ಪಾಠ ಕಲಿಯಬೇಕಾಗಿಲ್ಲ: ಸಿಎಂ ಸಿದ್ದರಾಮಯ್ಯ

ಮನುಷ್ಯರೇ ಅಲ್ಲದ ಬಿಜೆಪಿ ನಾಯಕರಿಂದ ನಾವು ಮನುಷ್ಯತ್ವದ ಬಗ್ಗೆ ಪಾಠ ಕಲಿಯಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಮನುಷ್ಯತ್ವದ ಬಗ್ಗೆ ನಾವು ಬಿಜೆಪಿಯಿಂದ ಪಾಠ ಕಲಿಯಬೇಕಾಗಿಲ್ಲ: ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :
ಉಡುಪಿ: ಮನುಷ್ಯರೇ ಅಲ್ಲದ ಬಿಜೆಪಿ ನಾಯಕರಿಂದ ನಾವು ಮನುಷ್ಯತ್ವದ ಬಗ್ಗೆ ಪಾಠ ಕಲಿಯಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರತಿಪಕ್ಷ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಇಂದು ಉಡುಪಿಯ ಬೈಂದೂರಿನಲ್ಲಿ ನಡೆದ ಸಾಧನ ಸಮಾವೇಶದ ಬಳಿಕ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ನಾವು ಹಿಂದೂಗಳು ಅದರಲ್ಲೂ ಮನುಷ್ಯತ್ವ ಇರುವ ಹಿಂದೂಗಳು. ಗೋಡ್ಸೆ ಆರಾಧಕರು ನಮಗೆ ಹಿಂದುತ್ವದ ಪಾಠ ಮಾಡುವುದು ಬೇಡ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿನ ಕೋಮು ಗಲಭೆಗಳಿಗೆ ಸಂಘ ಪರಿವಾರದ ಸಂಘಟನೆಗಳೇ ಕಾರಣ ಎಂದು ಆರೋಪಿಸಿದ ಸಿಎಂ, ಪಿಎಫ್ಐ, ಬಜರಂಗದಳ ಹಾಗೂ ಶ್ರೀರಾಮಸೇನೆ ಸಂಘಟನೆ ಮೇಲೆ ನಿಗಾ ಇಡಲು ಸೂಚನೆ ನೀಡಿದ್ದೇನೆ ಎಂದರು.
ಬೈಂದೂರಿನ ಪ್ರೌಢಶಾಲೆಯ ಎದುರಿನ ಗಾಂಧಿ ಮೈದಾನದಲ್ಲಿನ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದು, ಶಾಸಕ ಗೋಪಾಲ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.