ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲ: ಜಗದೀಶ್ ಶೆಟ್ಟರ್
ರಾಜ್ಯದಲ್ಲಿ ಕೊಲೆ, ದರೋಡೆ, ಅತ್ಯಾಚಾರಗಳು ನಡೆಯುತ್ತಿವೆ. ಬೆಂಗಳೂರು ಅತ್ಯಾಚಾರ ನಗರ ಎಂಬ ...

Published On :
ಬೆಂಗಳೂರು:ರಾಜ್ಯದಲ್ಲಿ ಕೊಲೆ, ದರೋಡೆ, ಅತ್ಯಾಚಾರಗಳು ನಡೆಯುತ್ತಿವೆ. ಬೆಂಗಳೂರು ಅತ್ಯಾಚಾರ ನಗರ ಎಂಬ ಕುಖ್ಯಾತಿ ಪಡೆಯುತ್ತಿದೆ. ಒಟ್ಟಾರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದಕ್ಕೆಲ್ಲ ರಾಜ್ಯದಲ್ಲಿ ಕೆಎಫ್ ಡಿ, ಪಿಎಫ್ಐ, ಎಸ್ ಡಿಎಫ್ಐ ಸಂಘಟನೆಗಳು ಬೀಡುಬಿಟ್ಟಿರುವುದರಿಂದ ಆಗುತ್ತಿದೆ. ಆದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಕೈ ಕಟ್ಟಿ ಕುಳಿತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
ಸಂಸ್ಥೆಯೊಂದರ ಪ್ರಕಾರ ಬೆಂಗಳೂರು ಕೊಲೆ ಪ್ರಕರಣಗಳಲ್ಲಿ ಎರಡನೇ ಸ್ಥಾನದಲ್ಲಿದೆ, ರೇಪ್, ಕಿಡ್ನಾಪ್ ಪ್ರಕರಣಗಳಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಸಮಾಜಕ್ಕೆ ಆಘಾತಕಾರಿಯಾಗಿರುವ ಸಂಘಟನೆಗಳನ್ನು ನಿಷೇಧಿಸುವಲ್ಲಿ ಮುಖ್ಯಮಂತ್ರಿಗಳು ಹಿಂದೇಟು ಹಾಕುತ್ತಿದ್ದಾರೆ. ಕೇವಲ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡಿ ಆರೋಪಿಸುತ್ತಾರೆ ಎಂದರು.
ಕಲ್ಬುರ್ಗಿ ಹತ್ಯೆ ವಿಚಾರದಲ್ಲಿ ಇದುವರೆಗೂ ಹಂತಕರನ್ನು ಪತ್ತೆ ಹಚ್ಚಲು ವಿಫಲರಾಗಿದ್ದಾರೆ. ಕೇವಲ ಸಂಘ ಪರಿವಾರದವರನ್ನು ದೂಷಿಸುವುದು ಸರಿಯಲ್ಲ, ಈ ವಿಚಾರದಲ್ಲಿ ಬುದ್ಧಿಜೀವಿಗಳು ತಾರತಮ್ಯದಿಂದ ನಡೆದುಕೊಳ್ಳುತ್ತಿದ್ದಾರೆ. ಬೇಜವಾಬ್ದಾರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ಯುವಕರು ಅಸುನೀಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ವೈದ್ಯಕೀಯ ಸಚಿವರು ಇದುವರೆಗೂ ಆಸ್ಪತ್ರೆಗೆ ಭೇಟಿ ನೀಡಿಲ್ಲ ಎಂದು ಶೆಟ್ಟರ್ ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


