ಬಿಜೆಪಿ, ಭಜರಂಗ ದಳ ಮತ್ತು ಆರ್ಎಸ್ಎಸ್ ನವರು ಸ್ವತಃ ಉಗ್ರಗಾಮಿಗಳು: ಸಿಎಂ ಸಿದ್ದರಾಮಯ್ಯ
ಬಿಜೆಪಿ, ಬಜರಂಗ ದಳ ಹಾಗೂ ಆರ್'ಎಸ್ಎಸ್'ನವರೇ ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ...

Published On :
ಚಾಮರಾಜನಗರ: ಬಿಜೆಪಿ, ಬಜರಂಗ ದಳ ಹಾಗೂ ಆರ್'ಎಸ್ಎಸ್'ನವರೇ ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಆಯೋಜಿಸಲಾಗಿದ್ದ ಸಾಧನಾ ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ನಾಗವಳ್ಳಿ ಗ್ರಾಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬಿಜೆಪಿ, ಬಜರಂಗ ದಳ ಹಾಗೂ ಆರ್'ಎಸ್ಎಸ್'ನವರೇ ಉಗ್ರಗಾಮಿಗಳಾಗಿದ್ದು, ಕೇಸರಿ ನಾಯಕರಿಗೆ ನಮ್ಮ ಬಗ್ಗೆಮಾತನಾಡುವ ನೈತಿಕ ಹಕ್ಕು ಇಲ್ಲ ಎಂದು ಹೇಳಿದ್ದಾರೆ.
ಬಳಿಕ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರ ಕೈವಾಡವಿದ್ದು, ಸಂಘಟನೆಯನ್ನು ನಿಷೇಧಿಸುವಂತೆ ಬಿಜೆಪಿ ಆಗ್ರಹಿಸುತ್ತಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ದೀಪಕ್ ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಕೈವಾಡವಿರುವ ಬಗ್ಗೆ ಯಾವುದೇ ಸೂಕ್ತ ದಾಖಲೆಗಳು ದೊರಕಿಲ್ಲ. ಸಾಮರಸ್ಯ ಕದಡುವ, ಕೋಮುವಾದಕ್ಕೆ ಪ್ರಚೋದನೆ ನೀಡುವುದನ್ನು ಸಹಿಸುವುದಿಲ್ಲ. ಪಿಎಫ್ಐ, ಎಸ್'ಡಿಪಿಐ, ಆರ್'ಎಸ್ಎಸ್, ಬಜರಂಗ ದಳ, ವಿಹೆಚ್'ಪಿ ಯಾವುದೇ ಸಂಘಟನೆಯಾದರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.
ಬಳಿಕ ಮಡಿಕೇರಿಯಲ್ಲಿ ಜೆಡಿಎಸ್ ಮುಖಂಡ ಎಂ.ಸಿ.ನಾಣಯ್ಯ ಅವರ ಭೇಟಿ ಕುರಿತ ಪ್ರಶ್ನೆಗೆ ಉತ್ತರಿಸಿರುವ ಅವರು, ನಾಣಯ್ಯ ಅವರು 1983ರಿಂದಲೂ ಆತ್ಮೀಯರಾಗಿದ್ದಾರೆ, ನಾಣಯ್ಯ ಅವರ ಆರೋಗ್ಯ ಸರಿಯಿಲ್ಲ. ಆಸ್ಪತ್ರೆಗೆ ದಾಖಲಾಗಿರುವುದರಿಂದಾಗಿ ಭೇಟಿ ಮಾಡಿ ಕ್ಷೇಮ ವಿಚಾರಿಸಿದ್ದೆ. ಇದರಲ್ಲಿ ವಿಶೇಷ ಅರ್ಥವೇನೂ ಇಲ್ಲ ಎಂದಿದ್ದಾರೆ.
ಅಧಿಕಾರಕ್ಕೆ ಬಂದ ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧದ ಎಲ್ಲಾ ಎಫ್ಐಆರ್'ಗಳ ದಾಖಲೆಗಳನ್ನು ಮನೆಮನೆಗಳಿಗೆ ಹಂಚುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ಇದೇ ವೇಳೆ ಪ್ರತಿಕ್ರಿಯೆ ನೀಡಿರುವ ಅವರು, ನನ್ನ ವಿರುದ್ಧ ಯಾವುದೇ ಕೇಸುಗಳಿಲ್ಲ. ಯಡಿಯೂರಪ್ಪ ಅವರ ಬಳಿ ದಾಖಲೆಗಳು ಇರುವುದೇ ಆದರೆ, ನ್ಯಾಯಾಲಯಕ್ಕೆ ಹೋಗಲಿ. ಇಷ್ಟಕ್ಕೂ ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗಬೇಕಲ್ಲ. ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಸ್ಥಾನಕ್ಕೆ ಏರುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


