ರಾಜಕೀಯ

ಅಮಿತ್ ಶಾ ಗೆಲ್ಲುವ ವಿಶ್ವಾಸ ನೋಡಿದ್ರೆ ಇವಿಎಂ ದುರ್ಬಳಕೆಯಾಗುವ ಸಾಧ್ಯತೆ ಇದೆ: ಪರಮೇಶ್ವರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಾನು ಹೇಳಿದಂತೆ ಕೆಲಸ ಮಾಡಿ ಸಾಕು, ಚುನಾವಣೆಯಲ್ಲಿ ನಾನು ಗೆಲ್ಲಿಸುತ್ತೇನೆ ಎಂದು ಹೇಳಿರುವುದನ್ನು....

ಅಮಿತ್ ಶಾ ಗೆಲ್ಲುವ ವಿಶ್ವಾಸ ನೋಡಿದ್ರೆ ಇವಿಎಂ ದುರ್ಬಳಕೆಯಾಗುವ ಸಾಧ್ಯತೆ ಇದೆ: ಪರಮೇಶ್ವರ
ಜಿ ಪರಮೇಶ್ವರ
Published On :
ಕಲಬುರ್ಗಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಾನು ಹೇಳಿದಂತೆ ಕೆಲಸ ಮಾಡಿ ಸಾಕು, ಚುನಾವಣೆಯಲ್ಲಿ ನಾನು ಗೆಲ್ಲಿಸುತ್ತೇನೆ ಎಂದು ಹೇಳಿರುವುದನ್ನು ಗಮನಿಸಿದರೆ ಇವಿಎಂ ದುರ್ಬಳಕೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಗುರುವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಇವಿಎಂ ಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆ ಗೆಲ್ಲುವ ಪಿತೂರಿಯನ್ನು ಬಿಜೆಪಿ ನಡೆಸಿದೆ. ಬಿಜೆಪಿ ಮುಖಂಡರು ಅಭಿವೃದ್ಧಿ ಬಗ್ಗೆ ಮಾತನಾಡುತ್ತಿಲ್ಲ. ಬರೀ ಚುನಾವಣೆಯಲ್ಲಿ ಗೆಲುವು ಸಾಧಿಸುವ ಬಗ್ಗೆಯಷ್ಟೇ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಅಮಿತ್ ಶಾ ಅವರು ತಾನೇ ನಿಂತು ಚುನಾವಣೆ ಗೆಲ್ಲಿಸಿ ಕೊಡುವುದಾಗಿ ಹೇಳುತ್ತಿರುವುದನ್ನು ಗಮನಿಸಿದರೆ ಇವಿಎಂ ಯಂತ್ರಗಳ ದುರ್ಬಳಕೆಯ ಶಂಕೆ ವ್ಯಕ್ತವಾಗುತ್ತಿದೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡದಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗುವುದು ಎಂದು ಪರಮೇಶ್ವರ ತಿಳಿಸಿದ್ದಾರೆ.
ಇದೇ ವೇಳೆ ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಪರಮೇಶ್ವರ ಅವರು, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕರ್ನಾಟಕಕ್ಕೆ ಕುಡಿಯುವ ನೀರು ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಿ. ಈಗಲೇ ನಾವು ಗೋವಾ ಕಾಂಗ್ರೆಸ್ ಮುಖಂಡರನ್ನು ಒಪ್ಪಿಸುತ್ತೇವೆ. ಆದರೆ ಬಿಜೆಪಿಯವರು ದ್ವಂದ್ವ ನಿಲುವನ್ನು ಮೊದಲು ಕೈಬಿಡಲಿ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.