ರಾಜಕೀಯ

ಉಗ್ರಗಾಮಿ ಹೇಳಿಕೆ: ಸಿಎಂ ಸಿದ್ದರಾಮಯ್ಯ, ಗುಂಡೂರಾವ್ ವಿರುದ್ಧ ಬಿಜೆಪಿ ಪೊಲೀಸ್ ದೂರು

ಬಿಜೆಪಿ ಹಾಗೂ ಆರ್'ಎಸ್ಎಸ್ ಸಂಘಟನೆಗಳನ್ನು ಉಗ್ರಗಾಮಿ ಸಂಘಟನೆಗಳು ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂಕೆ ನಗರ ಪೊಲೀಸ್ ಆಯುಕ್ತರಿಗೆ ಬಿಜೆಪಿ...

ಉಗ್ರಗಾಮಿ ಹೇಳಿಕೆ: ಸಿಎಂ ಸಿದ್ದರಾಮಯ್ಯ, ಗುಂಡೂರಾವ್ ವಿರುದ್ಧ ಬಿಜೆಪಿ ಪೊಲೀಸ್ ದೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್
Published On :
ಬೆಂಗಳೂರು: ಬಿಜೆಪಿ ಹಾಗೂ ಆರ್'ಎಸ್ಎಸ್ ಸಂಘಟನೆಗಳನ್ನು ಉಗ್ರಗಾಮಿ ಸಂಘಟನೆಗಳು ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂಕೆ ನಗರ ಪೊಲೀಸ್ ಆಯುಕ್ತರಿಗೆ ಬಿಜೆಪಿ ನಾಯಕರು ಶುಕ್ರವಾರ ದೂರು ಸಲ್ಲಿಸಿದ್ದಾರೆ, 
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತ ಟಿ.ಸುನೀಲ್ ಕುಮಾರ್ ಅವರನ್ನು ಭೇಟಿಯಾದ ಮಾಜಿ ಸಚಿವ, ಬಿಜೆಪಿ ವಕ್ತಾರ ಎಸ್.ಸುರೇಶ್ ಕುಮಾರ್ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರ ವಿರುದ್ಧ ಎರಡು ಪುಟಗಳ ದೂರು ಸಲ್ಲಿಸಿದೆ. 
ರಾಜ್ಯದಲ್ಲಿ ಬಿಜೆಪಿ ಹಾಗೂ ಆರ್'ಎಸ್ಎಸ್ ಕಾರ್ಯಕರ್ತರ ಹತ್ಯೆಯಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸರ್ಕಾರದ ಬಳಿ ಮನವಿ ಮಾಡಿದರೆ, ಕ್ರಮ ಕೈಗೊಳ್ಳುವುದು ಬಿಟ್ಟು ಸರ್ಕಾರ ನಮ್ಮ ವಿರುದ್ಧವೇ ಆರೋಪಗಳನ್ನು ಮಾಡುತ್ತಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಅವರು ಬಿಜೆಪಿಯನ್ನು ಉಗ್ರಗಾಮಿಗಳ ಸಂಘಟನೆಯೆಂದು ಹೇಳಿಕೆ ನೀಡಿದ್ದಾರೆಂದು ದೂರಿನಲ್ಲಿ ಬಿಜೆಪಿ ಹೇಳಿಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.