ಮುಹೂರ್ತದ ಪ್ರಕಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವೆ: ಹೆಚ್.ಡಿ.ಕುಮಾರಸ್ವಾಮಿ
ಹಿಂದುತ್ವ ಮುಂದಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಮುಂದಿನ ವಿಧಾನಸಭಾ ಚುನಾವಣೆಗೆ ಪ್ರಚಾರಗಳನ್ನು ನಡೆಸುತ್ತಿರುವ ಬೆನ್ನಲ್ಲೇ ಜೆಡಿಎಸ್ ಕೂಡ ಇದೇ ಹಾದಿಯಲ್ಲಿ ಮುನ್ನಡೆಯಲು ನಿರ್ಧರಿಸಿದೆ...

Published On :
ಬೆಂಗಳೂರು: ಹಿಂದುತ್ವ ಮುಂದಿಟ್ಟುಕೊಂಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಮುಂದಿನ ವಿಧಾನಸಭಾ ಚುನಾವಣೆಗೆ ಪ್ರಚಾರಗಳನ್ನು ನಡೆಸುತ್ತಿರುವ ಬೆನ್ನಲ್ಲೇ ಜೆಡಿಎಸ್ ಕೂಡ ಇದೇ ಹಾದಿಯಲ್ಲಿ ಮುನ್ನಡೆಯಲು ನಿರ್ಧರಿಸಿದೆ.
ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು, ರಾಜ್ಯದಲ್ಲಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ತಾವು ಹಿಂದೂ ಎಂದು ಹೇಳಿಕೊಳ್ಳುತ್ತಿದ್ದಾರೆ. ಹೀಗಾಗಿ ನಾವು ಕೂಡ ಮೂಹೂರ್ತದ ಪ್ರಕಾರವೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ. ಶೀಘ್ರದಲ್ಲಿಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಹೂರ್ತವನ್ನು ನಿಗದಿ ಮಾಡಿ, ಪಟ್ಟಿ ಬಿಡುಗಡೆ ಮಾಡಿ ನಾವೂ ಕೂಡ ಹಿಂದೂಗಳೇ ಎಂದು ತೋರಿಸುತ್ತೇವೆಂದು ಹೇಳಿದ್ದಾರೆ.
ಇದೇ ವೇಳೆ ಮಹಾದಾಯಿ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಮಹಾದಾಯಿ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಅವರು ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡಲೇ ವಿವಾದವನ್ನು ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSKumaraswamyಕುಮಾರಸ್ವಾಮಿbjpಬಿಜೆಪಿಜೆಡಿಎಸ್ಮುಹೂರ್ತಅಭ್ಯರ್ಥಿಗಳ ಪಟ್ಟಿcandidates listMuhurtham
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


