ರಾಜಕೀಯ

ಬಿಎಸ್ ವೈ, ಕೇಂದ್ರ ಸಚಿವರ ಸಮ್ಮುಖದಲ್ಲಿ ಬಿಜೆಪಿ ಸೇರಿದ ಇಬ್ಬರು ಜೆಡಿಎಸ್ ಶಾಸಕರು

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದ್ದು, ಇಬ್ಬರು ಜೆಡಿಎಸ್ ಶಾಸಕರು...

ಬಿಎಸ್ ವೈ, ಕೇಂದ್ರ ಸಚಿವರ ಸಮ್ಮುಖದಲ್ಲಿ ಬಿಜೆಪಿ ಸೇರಿದ ಇಬ್ಬರು ಜೆಡಿಎಸ್ ಶಾಸಕರು
ಬಿಜೆಪಿ ಸೇರಿದ ಜೆಡಿಎಸ್ ಶಾಸಕರು
Published On :
ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದ್ದು, ಇಬ್ಬರು ಜೆಡಿಎಸ್ ಶಾಸಕರು ಗುರುವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಲಿಂಗಸುಗೂರು ಜೆಡಿಎಸ್‌ ಶಾಸಕ ಮಾನಪ್ಪ ವಜ್ಜಲ್ ಹಾಗೂ ರಾಯಚೂರು ನಗರ ಜೆಡಿಎಸ್ ಶಾಸಕ ಡಾ. ಶಿವರಾಜ ಪಾಟೀಲ್ ಅವರು ಮಧ್ಯಾಹ್ನ ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವರಾದ ಅನಂತಕುಮಾರ್, ಪಿಯೂಶ್ ಗೊಯಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಮುರುಳೀಧರ ರಾವ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ಮಾನಪ್ಪ ವಜ್ಜಲ್ ಹಾಗೂ ಶಿವರಾಜ್ ಪಾಟೀಲ್ ಅವರು ಇಂದು ಬೆಳಗ್ಗೆ ಸ್ಪೀಕರ್ ಕೆ.ಬಿ.ಕೋಳಿವಾಡ್ ಅವರು ಕಚೇರಿಯಲ್ಲಿಲ್ಲದ ಕಾರಣ ವಿಧಾಸಭೆ ಕಾರ್ಯದರ್ಶಿ ಎಸ್ ಮೂರ್ತಿ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದರು.
ಇದೇ ವೇಳೆ 2013ರ ಚುನಾವಣೆಯಲ್ಲಿ ಗೌರಿ ಬೀದನೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಜೈಪಾಲರೆಡ್ಡಿ ಹಾಗೂ ಅಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್‌ಕುಮಾರ್, ಕೆಪಿಸಿಸಿ ಸದಸ್ಯ ಶಂಕರಪ್ಪ ಕೂಡ ಬಿಜೆಪಿ ಸೇರ್ಪಡೆಯಾದರು.
ಈ  ವೇಳೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಇರುವುದಕ್ಕೆ ಇದು ಸಾಕ್ಷಿ. ಕಾಂಗ್ರೆಸ್ ಮತ್ತು ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಲು ಇಚ್ಛಿಸಿರುವ ಶಾಸಕರ ದೊಡ್ಡ ಪಟ್ಟಿಯೇ ಇದೆ. ಪ್ರಾರಂಭಿಕವಾಗಿ ಇಬ್ಬರು ಶಾಸಕರು ಪಕ್ಷ ಸೇರಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.