ರಾಜಕೀಯ

ಹಗರಣದಿಂದ ರೆಡ್ಡಿ ಸಹೋದರರನ್ನು ಪಾರು ಮಾಡಲು ಕೇಂದ್ರದಿಂದ ಸಿಬಿಐ ದುರ್ಬಳಕೆ: ಸಿಎಂ ಸಿದ್ದರಾಮಯ್ಯ

ಗಣಿ ಹಗರಣದಿಂದ ರೆಡ್ಡಿ ಸಹೋದರರನ್ನು ರಕ್ಷಣೆ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಸಿಬಿಐಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...

ಹಗರಣದಿಂದ ರೆಡ್ಡಿ ಸಹೋದರರನ್ನು ಪಾರು ಮಾಡಲು ಕೇಂದ್ರದಿಂದ ಸಿಬಿಐ ದುರ್ಬಳಕೆ: ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :
ಮೈಸೂರು: ಗಣಿ ಹಗರಣದಿಂದ ರೆಡ್ಡಿ ಸಹೋದರರನ್ನು ರಕ್ಷಣೆ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಸಿಬಿಐಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. 
ಗಣಿ ಹಗರಣವನ್ನು ಎಸ್ಐಟಿ ತನಿಖೆಗೆ ಹಸ್ತಾಂತರ ಮಾಡಿರುವ ವಿಚಾರ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಎಸ್ಐಟಿ ತನಿಖೆ ಹಸ್ತಾಂತರದಲ್ಲಿ ರಾಜಕೀಯ ಉದ್ದೇಶವಿಲ್ಲ. ಸಿಬಿಐ ಹಗರಣದಲ್ಲಿ ಸಾಕ್ಷಾಧಾರ ಕೊರತೆ ನೆಪ ಒಡ್ಡಿತ್ತು. ಆಧರೆ, ಪ್ರಾಥಮಿಕ ವರದಿಯಲ್ಲಿ ಹಗರಣ ನಡೆದಿರುವುದು ಸಾಬೀತಾಗಿತ್ತು. ಹೀಗಾಗಿ ರಾಜ್ಯ ಸರ್ಕಾರದ ಸಚಿವ ಸಂಪುಟ ಉಪ ಸಮಿತಿ ವರದಿ ಆಧರಿಸಿ ಎಸ್ಐಟಿಗೆ ಮರುತನಿಖೆ ನಡೆಸುವಂದೆ ಆದೇಶಿಸಿದೆ ಎಂದು ಹೇಳಿದ್ದಾರೆ. 
ರೆಡ್ಡಿ ಸಹೋದರರನ್ನು ಹಗರಣದಿಂದ ಪಾರು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರದಿಂದ ಸಿಬಿಐನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಗಣಿ ಹಗರಣವನ್ನು ಸಿಬಿಐ ಕಾನೂನಾತ್ಮಕವಾಗಿ ತನಿಖೆ ಮಾಡದ ಕಾರಣ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.