ಉತ್ತರ ಕನ್ನಡಕ್ಕೆ 6 ಬಾರಿ ಸಂಸದರಾಗಿರುವ ಅನಂತಕುಮಾರ್ ಹೆಗಡೆ ಕೊಡುಗೆ ಏನು?: ಕುಮಾರಸ್ವಾಮಿ
ರಾಜಕಾರಣಿಗಳು ನಾಲಾಯಕ್ ಎಂದಿದ್ದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್....

Published On :
ಕಲಬುರಗಿ: ರಾಜಕಾರಣಿಗಳು ನಾಲಾಯಕ್ ಎಂದಿದ್ದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಉತ್ತರ ಕನ್ನಡ ಜಿಲ್ಲೆಗೆ ಆರು ಬಾರಿ ಸಂಸದರಾಗಿರುವ ಹೆಗಡೆ ಕೊಡುಗೆ ಏನು? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಬಗ್ಗೆ ದೂರದೃಷ್ಟಿ ಇಲ್ಲದ ರಾಜಕಾರಣಿಗಳು ನಾಲಾಯಕ್ ಎಂದಿದ್ದ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದ ಅನಂತಕುಮಾರ್ ಹೆಗಡೆ ತಮ್ಮನ್ನು ತಾವೇ ನಾಲಾಯಕ್ ಎಂದು ಕರೆದುಕೊಂಡಿದ್ದಾರೆ. ವಿವಾದಿತ ಹೇಳಿಕೆಗಳಿಂದ ಪ್ರಚಾರ ಬಯಸಿರುವ ಹೆಗಡೆ ಅವರಿಗೆ ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ. ಕೇವಲ ಬುದ್ಧಿಜೀವಿಗಳು, ಸಾಹಿತಿಗಳ ಬಗ್ಗೆ ಹಗುರವಾಗಿ ಮಾತನಾಡುವುದೇ ಅವರ ಸಾಧನೆಯಾಗಿದೆ ಎಂದು ತಿರುಗೇಟು ನೀಡಿದರು.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಸಿಎಂ ರಾಜ್ಯ ಸರ್ಕಾರದ ಹಣ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ರಾಜ್ಯದಿಂದ ವಿಶೇಷ ವಿಮಾನದ ಮೂಲಕ ಹೈಕಮಾಂಡ್ ಗೆ ಹಣ ರವಾನೆಯಾಗುತ್ತಿದೆ. ಈ ಮಹಾನ್ ಕಾರ್ಯಕ್ಕೆ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಐದು ಜನ ಸಚಿವರನ್ನು ನೇಮಕ ಮಾಡಿದ್ದಾರೆ ಎಂದು ಆರೋಪಿಸಿದರು.
ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಸೇರಿ ಐದು ಜನ ಸಚಿವರು ಹಣ ಸಾಗಿಸುತ್ತಿದ್ದಾರೆ. ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಚೆಕ್ ಮೂಲಕ ಹಣ ಪಡೆಯುತ್ತಿದ್ದರು. ಸಿದ್ದರಾಮಯ್ಯ ರಾಮನ ಲೆಕ್ಕ-ಕೃಷ್ಣನ ಲೆಕ್ಕದಲ್ಲಿ ಹಣ ಪಡೆಯುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದ ಬಳಿಕ ಎಲ್ಲರ ಬಣ್ಣ ಬಯಲು ಮಾಡುತ್ತೇವೆ ಎಂದು ಗುಡುಗಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


