ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಶಾಸಕ ಎಬಿ ಮಾಲಕರೆಡ್ಡಿ
ಕಾಂಗ್ರೆಸ್‌ನ ಹಿರಿಯ ಶಾಸಕ ಡಾ.ಎಬಿ ಮಾಲಕರೆಡ್ಡಿ ಅವರು ಶನಿವಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಮುಂದಿನ ವಿಧಾನಸಭೆ....

Published On :
ಯಾದಗಿರಿ: ಕಾಂಗ್ರೆಸ್‌ನ ಹಿರಿಯ ಶಾಸಕ ಡಾ.ಎಬಿ ಮಾಲಕರೆಡ್ಡಿ ಅವರು ಶನಿವಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಇಂದು ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಲಕರೆಡ್ಡಿ ಅವರು, ಮುಂದಿನ ಚುನಾವಣೆಯಲ್ಲಿ ನಾನಾಗಲಿ ಅಥವಾ ನನ್ನ ಕುಟುಂಬದ ಯಾರೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದು ನನ್ನ ಗಟ್ಟಿಯಾದ ನಿರ್ಧಾರ. ಹೈಕಮಾಂಡ್ ಹೇಳಿದರೂ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ವಯಸ್ಸಾದ ಮೇಲೆ ನಿವೃತ್ತಿ ಹೊಂದಿ ಯುವಕರಿಗೆ ಆದ್ಯತೆ ಕೊಟ್ಟರೆ ಅವರಿಗೂ ಅನುಕೂಲವಾಗಲಿದೆ. ರಾಜಕಾರಣಿಗಳು ತಮ್ಮ ವಯಸ್ಸು 80 ದಾಟಿದ ಮೇಲೆ ನಿವೃತ್ತಿ ಪಡೆದರೆ ಯುವಕರಿಗೆ ಅವಕಾಶ ಸಿಗುತ್ತದೆ ಎಂದರು.
ಕಾಂಗ್ರೆಸ್‌ನ ಕಾರ್ಯಕರ್ತರು ಹಾಗೂ ಮುಖಂಡರು ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಸದ್ಯ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದು ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ತಾವು ಬಿಜೆಪಿ ಅಥವಾ ಇನ್ನಾವುದೇ ರಾಜಕೀಯ ಪಕ್ಷ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ ಹಿರಿಯ ಕಾಂಗ್ರೆಸ್ ನಾಯಕ, ಬಿಜೆಪಿ ಸೇರುವ ಸುದ್ದಿ ಕೇವಲ ವದಂತಿ ಅಷ್ಟೆ ಎಂದರು.
ಕಾಂಗ್ರೆಸ್ ಹೈಕಮಾಂಡ್ ನಾಯಕರ ರಾಜಕೀಯ ನಡೆಯಿಂದ ಬೇಸರಗೊಂಡು ಶಾಸಕ ಮಾಲಕರೆಡ್ಡಿ ಅವರು ಚುನಾವಣೆ ರಾಜಕೀಯ ನಿವೃತ್ತಿ ಪಡೆಯುತ್ತಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ. ಮುಂದಿನ ದಿನಗಳಲ್ಲಿ ಮಾಲಕರೆಡ್ಡಿ ಅವರಿಗೆ ಪಕ್ಷದ ನಾಯಕರು ಯಾವ ರೀತಿ ಮನವೊಲಿಸುವ ಕೆಲಸ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


