ಬಿಜೆಪಿಯವರು ಇಂಗ್ಲೀಷ್ ಸರಿಯಾಗಿ ಅರ್ಥ ಮಾಡಿಕೊಳ್ಳುವುದಿಲ್ಲ: ರಾಮಲಿಂಗಾ ರೆಡ್ಡಿ
"ಬಿಜೆಪಿಯವರು ಇಂಗ್ಲೀಷ್ ಸರಿಯಾಗಿ ಅರ್ಥ ಮಾಡಿಕೊಳ್ಳುವುದಿಲ್ಲ" ಕರ್ನಾಟಕದ ಗೃಹಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Published On :
ಬೆಂಗಳೂರು: "ಬಿಜೆಪಿಯವರು ಇಂಗ್ಲೀಷ್ ಸರಿಯಾಗಿ ಅರ್ಥ ಮಾಡಿಕೊಳ್ಳುವುದಿಲ್ಲ" ಕರ್ನಾಟಕದ ಗೃಹಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಕೋಮುಗಲಭೆ ಸಂಬಂಧ ಬಂಧಿತರಾದ ಎಲ್ಲಾ ಅಲ್ಪಸಂಖ್ಯಾತ ಸಮುದಾಯದವರ ವಿರುದ್ಧದ ಪ್ರಕರಣವನ್ನು ಹಿಂಪಡೆಯುವಂತೆ ಸೂಚಿಸುವ್ಚ ಒಂದು ಜ್ಞಾಪನಾ ಪತ್ರವನ್ನು ರಾಜ್ಯ ಸರ್ಕಾರ ನಿನ್ನೆಯಷ್ಟೇ ಎಲ್ಲಾ ಜಿಲ್ಲೆಗಳ ಪೋಲೀಸ್ ಮುಖ್ಯಸ್ಥರಿಗೆ ಕಳಿಸಿತ್ತು.
ಈ ಜ್ಞಾಪನಾ ಪತ್ರವನ್ನು ಬಿಜೆಪಿ ಮುಖಂಡರು ಸುತ್ತೋಲೆ ಎಂದು ಪರಿಗಣಿಸಿ ಸರ್ಕಾರ ಅಲ್ಪಸಂಖ್ಯಾತರ ಒಲೈಕೆಯಲ್ಲಿ ತೊಡಗಿದೆ. ಇದಕ್ಕಾಗಿ ಅಲ್ಪಸಂಖ್ಯಾತ ಅಪರಾಧಿಗಳನ್ನು ರಕ್ಷಿಸಲು ಸುತ್ತೋಲೆ ಹೊರಡಿಸಿದೆ ಎಂದು ವಾಗ್ದಾಳಿ ನಡೆಸಿದ್ದರು.
ಇದರ ಸಲುವಾಗಿ ಇಂದು ಸ್ಪಷ್ಟನೆ ನಿಡಿದ ರಾಜ್ಯ ಗೃಹ ಸಚಿವ ರಾಮಲಿಂಗಾ ರೆಡ್ಡಿ "ಇದು ಸುತ್ತೋಲೆಯಲ್ಲ, ಕೇವಲ ಜ್ಞಾಪನಾ ಪತ್ರ. ಬಿಜೆಪಿಯವರು ಇಂಗ್ಲೀಷ್ ಸರಿಯಾಗಿ ಅರ್ಥ ಮಾಡಿಕೊಳ್ಳುವುದಿಲ್ಲ. ಅಲ್ಪಸಂಖ್ಯಾತರ ವಿರುದ್ಧ ಕೆಲವು ಸುಳ್ಳು ಪ್ರಕರಣಗಳು ದಾಖಲಾಗಿವೆ ಎಂದು ಅಲ್ಪಸಂಖ್ಯಾತ ಸಮೂಹದ ನಾಯಕರು ಹೇಳುತ್ತಿದ್ದಾರೆ. ಈ ಸಂಬಂಧ ಐ.ಜಿ. ಎಸ್ ಪಿಗಳಿಗೆ ಪತ್ರವೊಂದನ್ನು ಕಳಿಸಿ ನೆನಪಿಸಿದ್ದೇವೆ." ಎಎನ್ ಐ ಹೆ ತಿಳಿಸಿದರು.
ಕಳೆದ ಐದು ವರ್ಷಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿ ಕೋಮು ಗಲಭೆಗಳಲ್ಲಿ ಭಾಗಿಯಾಗಿದ್ದ ಜನರ ವಿರುದ್ಧ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲು ಸೂಚಿಸಿ ಪೋಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್ ರಾಜು ಸುತ್ತೋಲೆ ಹೊರಡಿಸಿದ್ದಾರೆ ಎಂದು ಮಾದ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು. ವಿಧಾನಸಭೆ ಚುನಾವಣೆ ಹತ್ತಿರವಾಗುವ ಸಮಯದಲ್ಲಿ ಈ ಸುತ್ತೋಲೆ ಪ್ರಕರಣ ವಿರೋಧ ಪಕ್ಷಗಳ ಪಾಲಿಗೆ ಸಹಜವಾಗಿಯೇ ಸರ್ಕಾರದ ವಿರುದ್ಧ ಪ್ರಬಲ ಅಸ್ತ್ರವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


