ಹೊಸಪೇಟೆ: ವಿಜಯನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ
ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಸಿಂಗ್ ಶನಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Published On :
ಹೊಸಪೇಟೆ: ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಸಿಂಗ್ ಶನಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹಾವೇರಿ ಜಿಲ್ಲೆ ರಾಣಿಬೆನ್ನೂರಿನಲ್ಲಿ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ ಅವರನ್ನು ಭೇಟಿ ಂಆಡಿದ ಆನಂದ್ ಸಿಂಗ್ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ.
"ಬಿಜೆಪಿ ಯಲ್ಲಿ ನಡೆಯುತ್ತಿರುವ ಆಂತರಿಕ ಕಲಹ, ಮುಖಂಡರು ತೋರುತ್ತಿರುವ ಮಲತಾಯಿ ಧೋರಣೆ ಇದರಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ.. ಆದರೆ ನಾನು ಯಾವುದೇ ಆಸೆ– ಆಕಾಂಕ್ಷೆಗಳಿಗೆ ಒಳಗಾಗಿಲ್ಲ. ಸ್ವ ಇಚ್ಚೆಯಿಂದ ರಾಜೀನಾಮೆ ನೀಡಿದ್ದೇನೆ." ಆನಂದ್ ಸಿಂಗ್ ಹೇಳಿದ್ಡಾರೆ.
ಇದೇ ವೇಳೆ ಮುಂದಿನ ಚುನಾವಣೆಯ ಕುರಿತಂತೆ ಮಾತನಾಡಿದ ಸಿಂಗ್ "ನಾನು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ. ಆದರೆ ಯಾವ ಪಕ್ಷದಿಂಡ ಎನ್ನುವುದನ್ನು ಮತದಾರರ ಅಭಿಪ್ರಾಯ ತಿಳಿದ ಬಳಿಕ ನಿರ್ಧರಿಸುತ್ತೇನೆ" ಎಂದರು.
ಆನಂದ್ ಸಿಂಗ್ ಅವರ ರಾಜೀನಾಮೆ ಅಂಗೀಕರಿಸುವುದಾಗಿ ಸ್ಪೀಕರ್ ಕೋಳಿವಾಡ ಹೇಳಿದ್ದು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಹೇಳಿರುವ ಸಿಂಗ್ ನಿಯಮ ಪ್ರಕಾರವೇ ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ ಅದನ್ನು ಅಂಗೀಕರಿಸಲಾಗಿದೆ ಎಂದರು.
ಒತ್ತಡ, ಬೆದರಿಕೆಗಳಿಂದ ರಾಜೀನಾಮೆ
ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಶಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಅವರಿಗೆ ಒತ್ತಡ ಹೇರಲಾಗಿತ್ತು. ಬೆದರಿಕೆಯೊಡ್ಡಿ ಅವರಿಂದ ರಾಜೀನಾಮೆ ಪಡೆಯಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಸಂಸದ ಪ್ರಹ್ಲಾದ ಜೋಶಿ ದೂರಿದ್ದಾರೆ.
ಆನಂದ್ ಸಿಂಗ್ ವಿರುದ್ಧ ಹಲವು ಪ್ರಕರಣಗಳಿರುವ ಕಾರಣ ಅವರಿಗೆ ರಾಜೀನಾಮೆ ಸಲ್ಲಿಸುವಂತೆ ಒತ್ತಡ ಹೇರಲಾಗಿತ್ತು ಎಂದ ಜೋಷಿ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳ್ಳಾಲ್ರಿಗೆ ಪಾದಯಾತ್ರೆ ಮಾಡಿದ್ದಾಗ ಇದೇ ಆನಂದ್ ಸಿಂಗ್ ವಿರುದ್ಧ ಸಮರ ಸಾರಿದ್ದರು. ಆದರೆ ಇಂದು ವರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.
ಮಹಿಳಾ ಮೋರ್ಚಾ, ರೈತ ಮೋರ್ಚಾ ಪದಾಧಿಕಾರಿಗಳ ರಾಜೀನಾಮೆ
ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲಿ ಅವರ ಬೆಂಬಲಿಗರಾದ ಮಹಿಳಾ ಮೋರ್ಚಾ, ರೈತ ಮೋರ್ಚಾ ಸೇರಿದಂತೆ ಎಂಟು ಮೋರ್ಚಾಗಳ ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಮಂಡಲ ಮೋರ್ಚಾ ಅಧ್ಯಕ್ಷ ಸಂದೀಪ್ ಸಿಂಗ್ ಈ ವಿಚಾರವನ್ನು ಸಿದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


