ರಾಜಕೀಯ

ವೇಣುಗೋಪಾಲ್ -ಪರಮೇಶ್ವರ್ ಭೇಟಿ: ನಿಗಮ ಮಂಡಳಿ ಹಂಚಿಕೆ ಬಗ್ಗೆ ಚರ್ಚೆ

ಮೊದಲನೇ ಹಂತದಲ್ಲಿ 30 ನಿಗಮ ಮಂಡಳಿಗಳಿಗೆ ನೇಮಕ ಮಾಡಿಕೊಳ್ಳುವ ಬಗ್ಗೆ ಸಮನ್ವಯ ಸಮಿತಿ ಪೂರ್ವಭಾವಿ ಸಭೆಯಲ್ಲಿ ಚರ್ಚೆಯಾಗಿದ್ದು, ...

ವೇಣುಗೋಪಾಲ್ -ಪರಮೇಶ್ವರ್ ಭೇಟಿ: ನಿಗಮ ಮಂಡಳಿ ಹಂಚಿಕೆ ಬಗ್ಗೆ ಚರ್ಚೆ
ಜಿ ಪರಮೇಶ್ವರ್ ಮತ್ತು ಕೆ,ಸಿ ವೇಣುಗೋಪಾಲ್
Published On :
ಬೆಂಗಳೂರು: ಮೊದಲನೇ ಹಂತದಲ್ಲಿ 30 ನಿಗಮ ಮಂಡಳಿಗಳಿಗೆ ನೇಮಕ ಮಾಡಿಕೊಳ್ಳುವ ಬಗ್ಗೆ ಸಮನ್ವಯ ಸಮಿತಿ ಪೂರ್ವಭಾವಿ ಸಭೆಯಲ್ಲಿ ಚರ್ಚೆಯಾಗಿದ್ದು, ಖಾತೆಗಳಿಗೆ ಅನುಸಾರವಾಗಿ ಮಂಡಳಿಗಳನ್ನ ಎರಡು ಪಕ್ಷಗಳು ಹಂಚಿಕೊಳ್ಳುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್​ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಸಮನ್ವಯ ಸಮಿತಿ ಪೂರ್ವಭಾವಿ ಸಭೆಗೂ ಮುನ್ನ ಕೆ.ಸಿ ವೇಣುಗೋಪಾಲ್ಅವರನ್ನು ಕುಮಾರ ಕೃಪಾ ಅತಿಥಿ ಗೃಹದಲ್ಲಿ ಭೇಟಿ ಮಾಡಿದ ಡಿಸಿಎಂ ಪರಮೇಶ್ವರ್ ಈ ಸಂಬಂಧ ಚರ್ಚಿಸಿದರು. ಜೆಡಿಎಸ್‌ಗೆ 10 ಹಾಗೂ ಕಾಂಗ್ರೆಸ್‌ಗೆ 20 ನಿಗಮ ಮಂಡಳಿ ಸ್ಥಾನ ಹಂಚಿಕೊಳ್ಳುವ ಬಗ್ಗೆ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ಜತೆ ಜಿ. ಪರಮೇಶ್ವರ್​ಹಾಗೂ ಸಿದ್ದರಾಮಯ್ಯ ಅವರು ಚರ್ಚಿಸಿದರು.
ಜೆಡಿಎಸ್‌ ಖಾತೆಗಳ ವ್ಯಾಪ್ತಿಗೆ ಬರುವ ನಿಗಮ ಮಂಡಳಿ ಜೆಡಿಎಸ್‌ಗೆ ಹಾಗೂ ಕಾಂಗ್ರೆಸ್‌ ಖಾತೆಗಳ ವ್ಯಾಪ್ತಿಗೆ ಬರುವ ನಿಗಮ ಮಂಡಳಿ ಕಾಂಗ್ರೆಸ್‌ಗೆ ಹಂಚಿಕೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.