ಕುಮಾರಸ್ವಾಮಿಯವರು 'ಯೂ ಟರ್ನ್' ಮುಖ್ಯಮಂತ್ರಿ: ಬಿಜೆಪಿ ಲೇವಡಿ
ಐಎಎಸ್ ಅಧಿಕಾರಿ ಡಿ ಕೆ ರವಿ ಅವರ ನಿಗೂಢ ಸಾವು ಮತ್ತು ಡಿವೈಎಸ್ಪಿ ಎಂ ಕೆ ಗಣಪತಿ ಆತ್ಮಹತ್ಯೆ ...

ಬೆಂಗಳೂರು: ಐಎಎಸ್ ಅಧಿಕಾರಿ ಡಿ ಕೆ ರವಿ ಅವರ ನಿಗೂಢ ಸಾವು ಮತ್ತು ಡಿವೈಎಸ್ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣಗಳಲ್ಲಿ ಸಚಿವ ಕೆ ಜೆ ಜಾರ್ಜ್ ಅವರ ಪರವಹಿಸಿ ನಿನ್ನೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿ ಮಾತನಾಡಿದ್ದು ಪ್ರತಿಪಕ್ಷ ಬಿಜೆಪಿಯ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.
ಈ ಕುರಿತು ತನ್ನ ಟ್ವಿಟ್ಟರ್ ಪೇಜ್ ನಲ್ಲಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಹೆಚ್ ಡಿ ಕುಮಾರಸ್ವಾಮಿಯವರು ಯೂಟರ್ನ್ ಮುಖ್ಯಮಂತ್ರಿ ಎಂದು ಸಾಬೀತಾಗಿದ್ದಾರೆ. ರಾಜ್ಯದಲ್ಲಿರುವ ಎಲ್ಲಾ ಯೂಟರ್ನ್ ಸೂಚನಾ ಫಲಕಗಳಿರುವ ಜಾಗಗಳಲ್ಲಿ ಕುಮಾರಸ್ವಾಮಿಯವರ ಫೋಟೋ ಹಾಕಬೇಕು ಎಂದು ಲೇವಡಿ ಮಾಡಿದೆ.
ನಾಲ್ಕು ವರ್ಷದ ಹಿಂದೆ ಡಿ ಕೆ ರವಿಯವರ ನಿಗೂಢ ಸಾವಿನ ಸಮಯದಲ್ಲಿ ಸಚಿವ ಕೆ ಜೆ ಜಾರ್ಜ್ ಅವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದ್ದಾಗ ಜಾರ್ಜ್ ರಂತಹ ಸಚಿವರು ಅಧಿಕಾರದಲ್ಲಿ ಮುಂದುವರಿಯಬಾರದು ಎಂದು ಹೇಳಿದ್ದರು.ಇಂದು ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿಯವರ ಸರ್ಕಾರದಲ್ಲಿ ಕೆ ಜೆ ಜಾರ್ಜ್ ಸಂಪುಟ ದರ್ಜೆ ಸಚಿವರಾಗಿರುವುದು ಮಾತ್ರವಲ್ಲದೆ ಅವರು ಅಮಾಯಕ ವ್ಯಕ್ತಿ ಎಂದು ಕುಮಾರಸ್ವಾಮಿಯವರು ಘೋಷಿಸಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಕುಮಾರಸ್ವಾಮಿಯವರ ಈ ಮಾತುಗಳಿಂದಲೇ ಅವರು ಎಂತಹ ವ್ಯಕ್ತಿ, ಎಷ್ಟು ಪ್ರಾಮಾಣಿಕರು, ಅವರು ನುಡಿದಂತೆ ನಡೆಯುವವರೇ ಎಂದು ತೋರಿಸುತ್ತದೆ ಎಂದು ಬಿಜೆಪಿ ಟೀಕಿಸಿದೆ.
ಸಚಿವ ಕೆ ಜೆ ಜಾರ್ಜ್ ಅವರನ್ನು ನಿನ್ನೆ ವಿಧಾನಸಭೆಯಲ್ಲಿ ಬಲವಾಗಿ ಸಮರ್ಥಿಸಿಕೊಂಡ ಕುಮಾರಸ್ವಾಮಿಯವರು ಅವರಿಗೆ ಕ್ಲೀನ್ ಚಿಟ್ ಕೊಟ್ಟಿದ್ದಾರೆ. ರಾಜ್ಯಪಾಲರ ವಂದನಾ ನಿರ್ಣಯದ ಪ್ರಸ್ತಾವದ ಮೇಲಿನ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರಿಸುತ್ತಿದ್ದ ಸಂದರ್ಭದಲ್ಲಿ ಸಿಬಿಐ ನೀಡಿರುವ ವರದಿಯಲ್ಲಿ ಜಾರ್ಜ್ ಪಾತ್ರವಿಲ್ಲ. ಇನ್ನು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತಂತೆ ನನಗಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಜಾರ್ಜ್ ಅವರ ಪಾತ್ರವಿಲ್ಲ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


