ರಾಜಕೀಯ

ನನ್ನ ಲೀಡ್ ಕಂಡು ಪ್ರಧಾನಿ ನರೇಂದ್ರ ಮೋದಿಯೇ ನಡುಗಿ ಹೋಗಿದ್ದರು: ಸಚಿವ ಜಿಟಿ ದೇವೇಗೌಡ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ 36,042 ಅಂತರದ ಲೀಡ್ ಪಡೆದಿದ್ದು ಇದನ್ನು ಕಂಡು ಪ್ರಧಾನಿ ನರೇಂದ್ರ ಮೋದಿಯೇ ನಡುಗಿ ಹೋಗಿದ್ದರು...

ನನ್ನ ಲೀಡ್ ಕಂಡು ಪ್ರಧಾನಿ ನರೇಂದ್ರ ಮೋದಿಯೇ ನಡುಗಿ ಹೋಗಿದ್ದರು: ಸಚಿವ ಜಿಟಿ ದೇವೇಗೌಡ
ನರೇಂದ್ರ ಮೋದಿ, ಜಿಟಿ ದೇವೇಗೌಡ
Published On :
ಮೈಸೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ 36,042 ಅಂತರದ ಲೀಡ್ ಪಡೆದಿದ್ದು ಇದನ್ನು ಕಂಡು ಪ್ರಧಾನಿ ನರೇಂದ್ರ ಮೋದಿಯೇ ನಡುಗಿ ಹೋಗಿದ್ದರು ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಹೇಳಿದ್ದಾರೆ. 
ಚಾಮುಂಡೇಶ್ವರಿ ಕ್ಷೇತ್ರದ ಲಿಂಗದೇವರ ಕೊಪ್ಪಲಿನಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಕೃತಜ್ಞತಾ ಸಭೆಯಲ್ಲಿ ಜಿಟಿ ದೇವೇಗೌಡ ಈ ಹೇಳಿಕೆ ನೀಡಿದ್ದಾರೆ. 
ಹೊಲದಲ್ಲಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಸೊಸೈಟಿಯಲ್ಲಿ ಅಕ್ಕಿ ತೂಕ ಮಾಡಿಕೊಂಡಿದ್ದ ನನ್ನನ್ನು ಈ ಸ್ಥಾನದಲ್ಲಿ ನಿಲ್ಲಿಸಿದ್ದೀರಿ ನಿಮ್ಮ ಪಾದ ಪೂಜೆ ಮಾಡಿ ನಾನು ಋಣ ತೀರಿಸಬೇಕಾಗಿದೆ ಎಂದು ಜಿಟಿಡಿ ಹೇಳಿದ್ದಾರೆ. 
ಕಳೆದ ಐದು ವರ್ಷಗಳಲ್ಲಿ ಚಾಮುಂಡೇಶ್ವರಿ ಜನ ಬಹಳ ಕಷ್ಟಪಟ್ಟಿದ್ದಾರೆ. ಬಹಳ ಮಂದಿ ಕೇಸ್ ಹಾಕಿಸಿಕೊಂಡಿದ್ದಾರೆ. ಕೆಲವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಹೇಳಿ ಕಿರುಕುಳ ನೀಡಿದ್ದಾರೆ. ನಮ್ಮ ಜನರಿಗೆ ಕೊಡಬಾರದ ಕಷ್ಟ ಕೊಟ್ಟಿದ್ದಾರೆ. ಪಂಚಾಯತ್ ಸದಸ್ಯರಲ್ಲದವರೂ ಬಂದು ಹಾರೆ ಹಿಡಿದು ಗುದ್ದಲಿ ಪೂಜೆ ಮಾಡಿದ್ದಾರೆ. ಇದೆಲ್ಲವನ್ನು ನಾನು ಸಹಿಸಿಕೊಂಡಿದ್ದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.