ರಾಜಕೀಯ

ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಫರ್ ನೀಡಿದ್ದರು, ನಾನೇ ಬೇಡವೆಂದೆ: ಎಂಬಿ ಪಾಟೀಲ್

ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ರಚನೆಗೆ ಹೋರಾಟ ನಡೆಸಿದವರಲ್ಲಿ ಪ್ರಮುಖರಾದ ಮತ್ತು ಸಮ್ಮಿಶ್ರ ...

ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಫರ್ ನೀಡಿದ್ದರು, ನಾನೇ ಬೇಡವೆಂದೆ: ಎಂಬಿ ಪಾಟೀಲ್
ಮಾಜಿ ಸಚಿವ ಎಂ ಬಿ ಪಾಟೀಲ್ ರನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದ ಸಂದರ್ಭ (ಸಂಗ್ರಹ ಚಿತ್ರ)
Published On :

ವಿಜಯಪುರ: ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ರಚನೆಗೆ ಹೋರಾಟ ನಡೆಸಿದವರಲ್ಲಿ ಪ್ರಮುಖರಾದ ಮತ್ತು ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ಮಂತ್ರಿಗಿರಿಗಾಗಿ ತೀವ್ರ ಹೋರಾಟ ನಡೆಸಿದ್ದ ಶಾಸಕ ಮಾಜಿ ಸಚಿವ ಎಂ ಬಿ ಪಾಟೀಲ್ ಪಕ್ಷದಲ್ಲಿ ಭಿನ್ನಮತೀಯವಾದ ನಡೆಸಿ ಭಾರೀ ಸುದ್ದಿಯಾಗಿದ್ದರು.

ಪ್ರತ್ಯೇಕ ಲಿಂಗಾಯತ ಧರ್ಮ ರಚನೆ ಮಾಡಲು ಹೋಗಿ ಕಾಂಗ್ರೆಸ್ ಗೆ ಲಾಭವಾಗುವ ಬದಲು ಕೈ ಸುಟ್ಟಿಕೊಂಡಿತು, ಹಲವು ಲಿಂಗಾಯತ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಲು ಪ್ರತ್ಯೇಕ ಧರ್ಮ ರಚನೆ ಮಾಡಲು ಹೊರಟಿದ್ದೇ ಕಾರಣ ಎಂದು ವಿಶ್ಲೇಷಿಸಲಾಗುತ್ತಿದ್ದು, ಇದರಿಂದಾಗಿಯೇ ಅವರಿಗೆ ಮಂತ್ರಿ ಸ್ಥಾನ ಕೈ ತಪ್ಪಿ ಹೋಯಿತು ಎನ್ನಲಾಗುತ್ತಿದೆ.

ಆದರೂ ಇನ್ನೂ ತಮಗೆ ಸಚಿವ ಸ್ಥಾನ ಸಮ್ಮಿಶ್ರ ಸರ್ಕಾರದಲ್ಲಿ ಸಿಗಬಹುದೆಂಬ ಆಶಾವಾದದಲ್ಲಿ ಅವರಿದ್ದಾರೆ. ಸಚಿವ ಸಂಪುಟ ವಿಸ್ತರಣೆಯನ್ನು ಇದಿರು ನೋಡುತ್ತಿರುವುದಾಗಿ ಅವರು ಹೇಳಿದ್ದಾರೆ.

ನನಗಿನ್ನೂ ಕಾಂಗ್ರೆಸ್ ಹೈಕಮಾಂಡ್ ಸಂಪುಟ ಸಚಿವ ಸ್ಥಾನದ ಆಫರ್ ಕೊಟ್ಟಿಲ್ಲ. ನೀಡಿದರೆ ಪರಿಗಣಿಸುತ್ತೇನೆ. ಆದರೆ ನನಗೆ ಶಾಸಕನಾಗಿ ಕೆಲಸ ಮಾಡಲು ಖುಷಿಯಿದೆ. ಪಕ್ಷದ ಹೈಕಮಾಂಡ್ ನನಗೆ ಮೊದಲು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಿತು. ಆದರೆ ನಾನೇ ನಿರಾಕರಿಸಿದೆ ಎಂದಿದ್ದಾರೆ.

ಜೆಡಿಎಸ್ ವರಿಷ್ಠ ದೇವೇಗೌಡರು ನಿಮ್ಮ ಸಂಪುಟ ಸೇರ್ಪಡೆಗೆ ಅಡ್ಡಿಪಡಿಸುತ್ತಿದ್ದಾರೆಯೇ ಎಂದು ಕೇಳಿದ್ದಕ್ಕೆ ಅವರು ನನ್ನ ತಂದೆಯ ಆಪ್ತ ಸ್ನೇಹಿತರು, ಅವರು ನನ್ನನ್ನು ಸಚಿವ ಮಾಡಲು ಸಾಧ್ಯವಿಲ್ಲ ಅಥವಾ ನಾನು ಸಚಿವನಾಗುವುದನ್ನು ತಪ್ಪಿಸಲೂ ಆಗುವುದಿಲ್ಲ. ಕಾಂಗ್ರೆಸ್ ನಲ್ಲಿ ಏನೇ ಬೆಳವಣಿಗೆ ಆಗುವುದಿದ್ದರೆ ಅದನ್ನು ಅವರಿಂದ ತಪ್ಪಿಸಲು ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್ ನ ಭಿನ್ನಮತೀಯ ಶಾಸಕರನ್ನು ನಾನಾಗಿ ನನ್ನ ಮನೆಗೆ ಕರೆದಿರಲಿಲ್ಲ. ಅವರಾಗಿಯೇ ಬಂದಿದ್ದರು. ಹಿರಿಯ ನಾಯಕರಾದ ಹೆಚ್ ಕೆ ಪಾಟೀಲ್ ಮತ್ತು ರಾಮಲಿಂಗಾ ರೆಡ್ಡಿಯವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕಾಗಿತ್ತು ಎಂದು ಎಂ ಬಿ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.