ರಾಜಕೀಯ

ಹೆಚ್'ಡಿಕೆ ಸರ್ಕಾರ ಉರುಳಿಸುವ ಕೆಲಸ ಬಿಜೆಪಿ ಮಾಡಲ್ಲ, ಸರ್ಕಾರ ತಾನಾಗಿಯೇ ಅಸ್ಥಿರಗೊಳ್ಳಲಿದೆ; ಶೋಭಾ ಕರಂದ್ಲಾಜೆ

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಉರುಳಿಸುವ ಕೆಲಸವನ್ನು ಬಿಜೆಪಿ ಮಾಡುವುದಿಲ್ಲ, ಶೀಘ್ರದಲ್ಲಿಯೇ ಸರ್ಕಾರ ತಾನಾಗಿಯೇ ಅಸ್ಥಿರಗೊಳ್ಳಲಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಮಂಗಳವಾರ ಹೇಳಿದ್ದಾರೆ...

ಹೆಚ್'ಡಿಕೆ ಸರ್ಕಾರ ಉರುಳಿಸುವ ಕೆಲಸ ಬಿಜೆಪಿ ಮಾಡಲ್ಲ, ಸರ್ಕಾರ ತಾನಾಗಿಯೇ ಅಸ್ಥಿರಗೊಳ್ಳಲಿದೆ; ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ
Published On :
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಉರುಳಿಸುವ ಕೆಲಸವನ್ನು ಬಿಜೆಪಿ ಮಾಡುವುದಿಲ್ಲ, ಶೀಘ್ರದಲ್ಲಿಯೇ ಸರ್ಕಾರ ತಾನಾಗಿಯೇ ಅಸ್ಥಿರಗೊಳ್ಳಲಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಮಂಗಳವಾರ ಹೇಳಿದ್ದಾರೆ. 
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ವಿರೋಧ ಪಕ್ಷವಾಗಿ ನಾವು ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದು, ಸರ್ಕಾರದ ತಪ್ಪುಗಳನ್ನು ಬಹಿರಂಗಪಡಿಸುತ್ತೇನೆ. ಲೋಕಸಭಾ ಚುನಾವಣೆ ಬಳಿಕ ಮೈತ್ರಿ ಸರ್ಕಾರ ತಾನಾಗಿಯೇ ನೆಲಕಚ್ಚಲಿದೆ. ಲೋಕಸಭಾ ಚುನಾವಣೆ ಪೂರ್ಣಗೊಂಡ ಬಳಿಕ ಮೈತ್ರಿ ಸರ್ಕಾರ ಅಧಿಕಾರದಲ್ಲಿರುವುದಿಲ್ಲ ಎಂದು ಹೇಳಿದ್ದಾರೆ. 
ಲೋಕಸಭಾ ಚುನಾವಣೆ ಪೂರ್ಣಗೊಂಡ ಬಳಿಕ ಜೆಡಿಎಸ್ ಜೊತೆಗೆ ಬಿಜೆಪಿ ಒಪ್ಪಂದ ಮಾಡಿಕೊಳ್ಳುವ ಕುರಿತು ಇದೇ ವೇಳೆ ಸುಳಿವು ನೀಡಿರುವ ಅವರು, ಲೋಕಸಭಾ ಚುನಾವಣೆ ಬಳಿಕ ಬಿಜೆಪಿಯದ್ದು 17 ಅಲ್ಲ 20 ಸೀಟುಗಳು ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ. 
ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತಂತೆ ಬಿಜೆಪಿ ಮೃದುಧೋರಣೆ ತೋರುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸೋತವರ ಮೇಲೆ ನಾವು ಕಲ್ಲನ್ನು ಎಸೆಯುವುದಿಲ್ಲ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ಕಣ್ಣೀರಿನ ಪ್ರವಾಹ ಹರಿಸುತ್ತಿದ್ದಾರೆಂದಿದ್ದಾರೆ. 
ಬಳಿಕ ಮೋದಿ ಸರ್ಕಾರವನ್ನು ಹೊಗಳಿದ ಅವರು, ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದಿರುವ ಮುದ್ರಾ ಯೋಜನೆ, ಕೃಷಿ ವಿಮೆ, ಸ್ವಚ್ಛ ಭಾರತ, ಉಜ್ವಲ ಯೋಜನೆಗಳು ಅತ್ಯುತ್ತಮವಾಗಿದ್ದು, ಹಿಂದಿನ ಯುಪಿಎ ಸರ್ಕಾರಕ್ಕೆ ಹೋಲಿಕೆ ಮಾಡಿದರೆ ಜನರಿಗೆ ಹೆಚ್ಚು ಅನುಕೂಲವನ್ನು ತಂದಿದೆ. 2019ರಲ್ಲಿಯೂ ಪ್ರಧಾನಿ ಮೋದಿಯವರೇ ಮತ್ತೆ ಅಧಿಕಾರಕ್ಕೆ ಬರಲಿದ್ದಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.