ತೀವ್ರ ಕುತೂಹಲ ಕೆರಳಿಸಿದ ಶ್ರೀರಾಮುಲು-ಕಿಚ್ಚ ಸುದೀಪ್ ಭೇಟಿ!
ಬಿಜೆಪಿ ಶಾಸಕ ಶ್ರೀರಾಮುಲು ಅವರು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ...

Published On :
ಬೆಂಗಳೂರು: ಬಿಜೆಪಿ ಶಾಸಕ ಶ್ರೀರಾಮುಲು ಅವರು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅದಾಗಲೇ ಚುನಾವಣಾ ಪ್ರಚಾರ ಕಸರತ್ತು ನಡೆಸಿದ್ದು ಇದಕ್ಕೆ ಪೂರ್ವಭಾವಿಯಾಗಿ ಸಮರ್ಥನೆಗಾಗಿ ಸಂಪರ್ಕ ಪ್ರಚಾರಾಂದೋಲನ ನಡೆಸುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನತೆಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿರುವ ಬಗ್ಗೆ ಮಾಹಿತಿ ಇರುವ ಪುಸ್ತಕವನ್ನು ಗಣ್ಯರಿಗೆ ನೀಡುವ ಮೂಲಕ ಬಿಜೆಪಿಯ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸುವುದು ಪಕ್ಷದ ಮೂಲ ಉದ್ದೇಶವಾಗಿದ್ದು ಈ ಹಿನ್ನೆಲೆಯಲ್ಲಿ ಶ್ರೀರಾಮುಲು ಅವರು ಸುದೀಪ್ ಅವರನ್ನು ಭೇಟಿ ಮಾಡಿ ಕಿರು ಪುಸ್ತಕವನ್ನು ನೀಡಿದರು.
ಬಿಜೆಪಿ ಈಗಾಗಲೇ ಸಾಕಷ್ಟು ಗಣ್ಯವ್ಯಕ್ತಿಗಳನ್ನು ಭೇಟಿ ಮಾಡಿ ಮೋದಿ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯ ಪುಸ್ತಕವನ್ನು ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


