ರಾಹುಲ್ ಗಾಂಧಿ ಭೇಟಿ ಮಾಡಿದ ಸಿದ್ದರಾಮಯ್ಯ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ
ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದಾರಮಯ್ಯ.....

Published On :
ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದಾರಮಯ್ಯ ಅವರು ಸೋಮವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ ಅವರು, ಇಂದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸುಮಾರು 30 ನಿಮಿಷಗಳ ಕಾಲ ರಾಜ್ಯ ರಾಜಕೀಯದ ಬಗ್ಗೆ, ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ಖಾಲಿ ಇರುವ ಸಚಿವ ಸ್ಥಾನ ಭರ್ತಿ ಮಾಡುವ ಬಗ್ಗೆ ಮತ್ತು ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ಚರ್ಚಿಸಿದರು ಎನ್ನಲಾಗಿದೆ.
ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಕಾರ್ಯಾಕರಿ ಸಮಿತಿ ಸಭೆಯಲ್ಲಿ ಭಾಗವಹಿಸುತ್ತಿದ್ದು, ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆಯು ಚರ್ಚೆ ನಡೆಯುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


