ಘನತೆ, ಗೌರವದಿಂದ ವರದಿ ಮಾಡಿ: ಮಾಧ್ಯಮಗಳ ವಿರುದ್ಧ ರೇವಣ್ಣ ಕಿಡಿ
ಟಿವಿ ಮಾಧ್ಯಮಗಳು ಘನತೆ, ಗೌರವ ಕಾಪಾಡಿಕೊಂಡು ವರದಿಗಳನ್ನು ಮಾಡಬೇಕು ಎಂದು ಲೋಕೋಪಯೋಗಿ....

Published On :
ಬೆಂಗಳೂರು: ಟಿವಿ ಮಾಧ್ಯಮಗಳು ಘನತೆ, ಗೌರವ ಕಾಪಾಡಿಕೊಂಡು ವರದಿಗಳನ್ನು ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರು ಸೋಮವಾರ ಮಾಧ್ಯಮಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರೇವಣ್ಣ, ನಾನು ಬೇರೆ ಇಲಾಖೆಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹಸ್ತಕ್ಷೇಪ ಮಾಡುವುದಕ್ಕೆ ನನಗೆೇನೂ ಹುಚ್ಚು ಡಿದಿದೆಯೇ? ಎಂದು ಪ್ರಶ್ನಿಸಿದರು.
ಬೇರೆ ಇಲಾಖೆಗಳಲ್ಲಿ ನಾನೇಕೆ ಹಸ್ತಕ್ಷೇಪ ಮಾಡಲಿ, ನಾನ್ಯಾಕೆ ನನ್ನ ಇಲಾಖೆ ಬಿಟ್ಟು ಬೇರೆ ಕಡೆ ತಲೆ ಹಾಕಲಿ? ಮುಜರಾಯಿ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿದ್ದೇನೆ, ಆ ಅಧಿಕಾರಿಗಳ ಜತೆ ಸಭೆ ಮಾಡಿದ್ದೇನೆ ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿದ್ದೀರಿ ಎಂದು ಮಾಧ್ಯಮದವರ ಮೇಲೆ ಹರಿಹಾಯ್ದಿದ್ದಾರೆ.
ಈ ಹಿಂದೆ ವಾರ ಪತ್ರಿಕೆಯೊಂದು ನನ್ನ ವಿರುದ್ಧ ನಿರಂತರವಾಗಿ ಸುದ್ದಿ ಮಾಡಿತ್ತು. ಆದರೂ ನಾನು ಐದು ಬಾರಿ ಎಂಎಲ್ಎ ಆದೆ. ನೀವು ಏನೇ ಮಾಡಿದರೂ ನಾನು ಹೆದರುವುದಿಲ್ಲ. ಸುಳ್ಳು ಸುದ್ದಿ ಮಾಡಿ ನಿಮ್ಮ ಹೆಸರು ನೀವೇ ಹಾಳು ಮಾಡಿಕೊಳ್ಳುತ್ತೀರಿ. ನಿಮಗೆ ಹೆದರಿ ನಾನು ಮನೆಗೆ ಓಡಿ ಹೋಗುವುದಿಲ್ಲ. ನಿಮಗೆ ಬೇಕಾದ ಹಾಗೆ ಸುದ್ದಿ ಮಾಡಿಕೊಳ್ಳಿ ಎಂದು ಕಿಡಿಕಾರಿದರು.
ರೇವಣ್ಣ ಅವರು ಬೇರೆ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಾರೆ ಎಂಬ ಕೆಲ ಕಾಂಗ್ರೆಸ್ ಮುಖಂಡರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಮಾಡಿದ ಮಾಧ್ಯಮದವರ ವಿರುದ್ಧ ಸಚಿವರು ಈ ರೀತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


