ಹಿಂದುತ್ವ ಬಿಜೆಪಿಯ ಚುನಾವಣೆ ಗಿಮ್ಮಿಕ್: ಕೆಪಿಸಿಸಿ ಅಧ್ಯಕ್ಷ
ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವಲ್ಲಿ ವಿಫಲತೆ ಮತ್ತಿತರ ಅಂಶಗಳ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ.

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ದಿನೇಶ್ ಗುಂಡೂರಾವ್ ಮೇಲೆ ಜವಾಬ್ದಾರಿ ಹೆಚ್ಚಾಗಿದೆ. ಲೋಕಸಭಾ ಚುನಾವಣೆ ಸಿದ್ಧತೆಗೂ ಸಾಕಷ್ಟು ವೇಳೆ ಇಲ್ಲದಂತಾಗಿದ್ದು, ಕಾರ್ಯಕರ್ತರು ಹಾಗೂ ಮೈತ್ರಿ ಪಕ್ಷದೊಂದಿಗೆ ಸಂಬಂಧವನ್ನು ಉತ್ತಮ ರೀತಿಯಲ್ಲಿ ಬೆಳೆಸಿಕೊಂಡು ಹೋಗಬೇಕಾಗಿದೆ.
ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವಲ್ಲಿ ವಿಫಲತೆ ಮತ್ತಿತರ ಅಂಶಗಳ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ.
ಕರ್ನಾಟಕ ಮಾದರಿಯಲ್ಲಿ ದೇಶದೆಲ್ಲೆಡೆ ಮೈತ್ರಿ ಮಾಡಿಕೊಳ್ಳುತೀರಾ ?
ಅದು ಆ ರಾಜ್ಯಗಳನ್ನು ಆವಲಂಬಿಸಿದೆ. ಆದರೆ, ಇತರ ರಾಜಕೀಯ ಪಕ್ಷಗಳೊಂದಿಗೆ ಕೆಲಸ ಮಾಡಲು ಒಲವು ಹೊಂದಿದೆ. ಇಂದಿನ ಪರಿಸ್ಥಿತಿಯಲ್ಲಿ ಮೈತ್ರಿ ಅಗತ್ಯವಾಗಿದೆ. ಯುಪಿಎ ಅವಧಿಯಲ್ಲಿ 10 ವರ್ಷಗಳ ಮೈತ್ರಿ ಸರ್ಕಾರ ನೀಡುವಲ್ಲಿ ಯಶಸ್ವಿಯಾಗಿದ್ದೇವೆ. ಕೇರಳದಲ್ಲಿಯೂ ಮೈತ್ರಿ ಮಾಡಿಕೊಂಡಿದ್ದೇವೆ. ತಮಿಳುನಾಡಿನಲ್ಲಿ ಹಲವು ಬಾರಿ ಎಐಎಡಿಎಂಕೆ ಹಾಗೂ ಡಿಎಂಕೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ. ಕರ್ನಾಟಕ ಮಾದರಿಯಲ್ಲಿ ಆದರೆ,ಸಮಾನ ಮನಸ್ಕ ಪಕ್ಷಗಳೊಂದಿಗೆ ಕೆಲಸ ಮಾಡಲು ಒಲವು ಹೊಂದಿದ್ದೇವೆ.
ಚಾಲಕನ ಸೀಟಿನಲ್ಲಿ ಪ್ರಾದೇಶಿಕ ಪಕ್ಷಗಳನ್ನು ಹಾಕಲು ಕಾಂಗ್ರೆಸ್ ಸಿದ್ಧವಿದೆಯೇ ?
ಇದು ಎಲ್ಲಾ ಪರಿಸ್ಥಿತಿಗೆ ಸಂಬಂಧಿಸಿದ್ದು, ಕರ್ನಾಟಕದಲ್ಲಿ ಐದು ವರ್ಷಗಳ ಕಾಲ ಅಧಿಕಾರ ನಡೆಸಿದ್ದೇವೆ. ಆದರೆ, ಬಹುಮತ ಪಡೆಯಲು ಸಾಧ್ಯವಾಗಿಲ್ಲ. ಕೆಲ ನಿರ್ಧಾರಗಳಲ್ಲಿ ರಾಜಿ ಮಾಡಿಕೊಂಡಿದ್ದೀವಿ. ಇದರ ಅಗತ್ಯವಿಲ್ಲ.
ಕರ್ನಾಟಕ ಕಾಂಗ್ರೆಸ್ ಬಿಹಾರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಅಥವಾ ತಮಿಳುನಾಡು ರೀತಿಯಲ್ಲಿ ಆಗುತ್ತಿದೆ ಅನ್ನಿಸುತ್ತಿದೇಯಾ?
ಇಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸದೃಢವಾಗಿದೆ. ಶೇಕಡವಾರು ಮತಗಳಿಕೆಯಲ್ಲಿ ಹೆಚ್ಚಿನ ಮತ ಕಾಂಗ್ರೆಸ್ ಪಡೆದುಕೊಂಡಿದೆ. ಜನರ ವಿಶ್ವಾಸವನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿದ್ದೇವೆ
ಲೋಕಸಭೆ ಚುನಾವಣೆಗೆ ಜೆಡಿಎಸ್ ಅವರೊಂದಿಗೆ ಹೊಂದಾಣಿಕೆ ಮೂಲಕ ನಿಮ್ಮ ಮತ ಹಂಚಿಕೆಯನ್ನು ಕಳೆದುಕೊಳ್ಳುವ ಅಪಾಯವನ್ನು ನೀವು ತೆಗೆದುಕೊಳ್ಳುತ್ತೀರಾ?
ಗೆಲ್ಲಲ್ಲಿ ಅಥವಾ ಸೋಲಲ್ಲಿ ಇದು ಸದೃಢ ಮೈತ್ರಿ. ಮೈತ್ರಿಯಿಂದ ಕೆಲವು ಭಾಗಗಳಲ್ಲಿ ನಮಗೆ ಅನುಕೂಲ ಆಗಬಹುದು, ಆಗದೆ ಇರಬಹುದು ಆದರೆ, ಇದರಡಿಯಲ್ಲಿ ಕೆಲ ನಿರ್ಧಾರಗಳನ್ನು ಕೈಗೊಳ್ಳಬಹುದು. ನಾವು ಯಾವೂದನ್ನು ಊಹಿಸಲು ಸಾಧ್ಯವಿಲ್ಲ. ಉತ್ತಮ ನಿರ್ಧಾರ ಕೈಗೊಳ್ಳುತ್ತೇವೆ.
ಕರ್ನಾಟಕದಲ್ಲಿ ಬಿಜೆಪಿಯ ಬಲವಾದ ವ್ಯತ್ಯಾಸವೇ?
ಮಾಧ್ಯಮಗಳಲ್ಲಿ ಮಾತ್ರ ಬಿಜೆಪಿ ಬಲ ಹೆಚ್ಚಳವಾಗಿದೆ. ಕಾಂಗ್ರೆಸ್ ಜೆಡಿಎಸ್ ಪ್ರತ್ಯೇಕವಾಗಿಯೇ ಚುನಾವಣೆ ಎದುರಿಸಲಿವೆ. ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗಲೆಂದು ಮೈತ್ರಿ ಮಾಡಿಕೊಂಡಿದ್ದೇವೆ.
ಕುಮಾರಸ್ವಾಮಿ ನೇರವಾಗಿ ರಾಹುಲ್ ಗಾಂಧಿ ಭೇಟಿ ಮಾಡುವುದು ರಾಜ್ಯ ಕಾಂಗ್ರೆಸ್ ನಾಯಕರನ್ನು ಚಿಂತೆಗೀಡು ಮಾಡಿದೆಯಾ?
ಖಂಡಿತವಾಗಿಯೂ ಇಲ್ಲ. ಅದು ಯಾಕೆ ಆಗಬಾರದು . ದೇವೇಗೌಡರನ್ನು ನಾವೂ ಸಹ ನೇರವಾಗಿ ಭೇಟಿ ಮಾಡುತ್ತೇವೆ. ಕುಮಾರಸ್ವಾಮಿ ನಮ್ಮ ನಾಯಕರೊಂದಿಗೆ ಮಾತನಾಡಲಿ ಆದರೆ, ಅಂತಿಮವಾಗಿ ರಾಹುಲ್ ಗಾಂಧಿ ನಮ್ಮೊಂದಿಗೆ ಸಮಾಲೋಚಿಸಿಯೇ ನಿರ್ಧಾರ ಕೈಗೊಳ್ಳುತ್ತಾರೆ.
ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕೀಯದಿಂದ ದೂರ ತಳ್ಳುವ ಪ್ರಯತ್ನ ನಡೆಯುತ್ತಿದೇಯಾ?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


