ನನ್ನನ್ನು ಸಂಪುಟಕ್ಕೆ ಪರಿಗಣಿಸಬೇಕು: ಶಾಸಕ ಬಿ.ಸಿ. ಪಾಟೀಲ್
ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಂಪುಟ ವಿಸ್ತರಣೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್ ಕೂಡ ಸಚಿವ ಸ್ಥಾನದ ಪ್ರಬಲ ..

Published On :
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಂಪುಟ ವಿಸ್ತರಣೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್ ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ತಮಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ತಮಗೆ ಬೇಡ, ನನ್ನನ್ನು ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳಿಂದ ಲಿಂಗಾಯತ ಸಮುದಾಯದ ಏಕೈಕ ಲಿಂಗಾಯತ ಶಾಸಕ ನಾನೋಬ್ಬನೇ, ಹೀಗಾಗಿ ನನಗೆ ಸಂಪುಟ ವಿಸ್ತರಣೆಯಲ್ಲಿ ನನಗೆ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಮಾಜಿ ಸಚಿವರಾದ ಎಂ.ಬಿ ಪಾಟೀಲ್, ಎಚ್,ಕೆ ಪಾಟೀಲ್, ರಾಮಲಿಂಗಾರೆಡ್ಡಿ, ರೋಷನ್ ಬೇಗ್ ಸೇರಿದಂತೆ ಹಲವಾರು ನಾಯಕರು ಸಂಪುಟಕ್ಕೆ ಸೇರಬೇಕೆಂದು ಆಕ್ರೋಶಗೊಂಡಿದ್ದಾರೆ. ಮುನಿಸಿಕೊಂಡಿರುವ ಶಾಸಕರನ್ನು ಸಮಾಧಾನ ಪಡಿಸಲು ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ, ಆಗಸ್ಟ್ 2ನೇ ವಾರದಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ.
ಹಲವು ನಾಯಕರಿಗೆ ಆಷಾಡದಲ್ಲಿ ಸಂಪುಟ ವಿಸ್ತರಣೆಯಾಗುವುದು ಬೇಕಿಲ್ಲ, ಹೀಗಾಗಿ ಆಗಸ್ಟ್ ತಿಂಗಳಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


