2 ಹಂತದಲ್ಲಿ ಸಂಪುಟ ರಚನೆ, ಮೊದಲು ಜೆಡಿಎಸ್, ಬಳಿಕ ಕಾಂಗ್ರೆಸ್ ಸರದಿ: ಸಿಎಂ ಕುಮಾರಸ್ವಾಮಿ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಕಂಗಟಾಗಿ ಉಳಿದಿರುವ ಸಂಪುಟ ರಚನೆ ಸರ್ಕಸ್ ಎರಡು ಹಂತದಲ್ಲಿ ನಡೆಯಲಿದೆ ಎಂದು ಸಿಎಂ ಕುಮಾರಸ್ವಾಮಿ ಮಂಗಳವಾರ ಹೇಳಿದ್ದಾರೆ.

Published On :
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಕಂಗಟಾಗಿ ಉಳಿದಿರುವ ಸಂಪುಟ ರಚನೆ ಸರ್ಕಸ್ ಎರಡು ಹಂತದಲ್ಲಿ ನಡೆಯಲಿದೆ ಎಂದು ಸಿಎಂ ಕುಮಾರಸ್ವಾಮಿ ಮಂಗಳವಾರ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಸಿಎಂ ಕುಮಾರಸ್ವಾಮಿ, ಮೈತ್ರಿ ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾವಿಲ್ಲ. ಆದರೆ ಖಾತೆ ಹಂಚಿಕೆ ಸಂಬಂದ ಚರ್ಚೆಗಳು ಮುಂದುವರೆದಿವೆ. ಹೀಗಾಗಿ ಸಂಪುಟ ರಚನೆಯನ್ನು 2 ಹಂತದಲ್ಲಿ ಮಾಡುವ ಕುರಿತು ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ ಜೆಡಿಎಸ್ ನ 9 ಶಾಸಕರು ಸಚಿವರಾದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಬಳಿಕ 2ನೇ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಿದ್ದಾರೆ.
ಜೆಡಿಎಸ್ ಪಕ್ಷದ ವರಿಷ್ಠರಾದ ದೇವೇಗೌಡ ಅವರು ತಮಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಹೀಗಾಗಿ ಖಾತೆ ಹಂಚಿಕೆ ಸಂಬಂಧ ಅಂತಿಮ ನಿರ್ಧಾರ ನನ್ನದೇ. ಖಾತೆ ಹಂಚಿಕೆ ಸಂಬಂಧ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಕೇವಲ ಉತ್ತಮ ಆಡಳಿತ ನೀಡುವುದರತ್ತ ನಮ್ಮ ಗಮನವಿದೆ. ಇಂದು ನಡೆದ ನಮ್ಮ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ ಉತ್ತಮ ಆಡಳಿತ ನೀಡಲು ಸಹಕರಿಸುವಂತೆ ಶಾಸಕರಲ್ಲಿ ಮನವಿ ಮಾಡಿದ್ದೇವೆ. ಶಾಸಕರೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದ್ದಾರೆ.
ಅಂತೆಯೇ ಜೂನ್ 1ರ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಒಪ್ಪಂದ ಅನ್ವಯ ಕಾಂಗ್ರೆಸ್ ನ 22 ಶಾಸಕರಿಗೆ ಮತ್ತು ಜೆಡಿಎಸ್ 12 ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಗೆ ಗೃಹಖಾತೆ, ನೀರಾವರಿ, ಆರೋಗ್ಯ, ಕೃಷಿ, ಮಹಿಳಾ ಮತ್ತು ಮಕ್ಕಳ ಸಬಲೀಕರಣ ಖಾತೆ ನೀಡಲಾಗಿದ್ದು, ಜೆಡಿಎಸ್ ಗೆ ವಿತ್ತ, ಅಬಕಾರಿ, ನಾಗದರಿಕ ಸೇವೆ, ಶಿಕ್ಷಣ, ಪ್ರವಾಸೋಧ್ಯಮ, ಸಾರಿಗೆ ಖಾತೆ ನೀಡಲಾಗಿದೆ ಎಂದು ತಿಳಿಸಿದರು.
ಅಂತೆಯೇ ಉಭಯ ಪಕ್ಷಗಳೂ ಸರ್ಕಾರದ ಸುಸೂತ್ರ ಆಡಳಿತಕ್ಕಾಗಿ ಸಮನ್ವಯ ಸಮಿತಿ ಮತ್ತು ಮೇಲ್ವಿಚಾರಣೆ ಸಮಿತಿ ರಚನೆಗೆ ಒಪ್ಪಿಗೆ ನೀಡಿವೆ. ಈ ಸಮಿತಿಗೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿದ್ದಾರೆ. ಈ ಸಮಿತಿಯ ಸಂಚಾಲಕರಾಗಿ ಜೆಡಿಎಸ್ ಪಕ್ಷದ ದಿನೇಶ್ ಅಲಿ ನೇಮಕವಾಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengaluruJDSಕುಮಾರಸ್ವಾಮಿPoliticsರಾಜಕೀಯಜೆಡಿಎಸ್Karnataka GovernmentHD Kumaraswamyಕರ್ನಾಟಕ ಸರ್ಕಾರKarnataka politics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


