ಸಂಪುಟದಿಂದ ಹೊರಟ್ಟಿ ಕೈ ಬಿಟ್ಟ ಜೆಡಿಎಸ್: ದೇವೇಗೌಡರ ವಿರುದ್ಥ ಅಸಮಾಧಾನ
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ವೀರಶೈವ ಲಿಂಗಾಯತ ನಾಯಕರಿಗೆ ಸಚಿವ ಸ್ಥಾನ ನೀಡದಿರಲು ಪಕ್ಷ ಮುಂದಾಗಿರುವುದಕ್ಕೆ...

Published On :
ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ವೀರಶೈವ ಲಿಂಗಾಯತ ನಾಯಕರಿಗೆ ಸಚಿವ ಸ್ಥಾನ ನೀಡದಿರಲು ಪಕ್ಷ ಮುಂದಾಗಿರುವುದಕ್ಕೆ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅಸಮಾಧಾನಗೊಂಡಿದ್ದಾರೆ.
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ವಿಧಾನ ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ಇಲ್ಲ ಎಂದು ಹೇಳಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ವೀರಶೈವ-ಲಿಂಗಾಯತರು ಜೆಡಿಎಸ್ ಪಕ್ಷವನ್ನು ಕೈ ಹಿಡಿದಿಲ್ಲ. ಮುಂದೆಯೂ ಕೈ ಹಿಡಿಯುವುದು ಅನುಮಾನ ಎಂದಿದ್ದಾರೆ.
ದೇವೇಗೌಡರ ಈ ಹೇಳಿಕೆಯಿಂದ ಎಂಎಲ್ಸಿ ಬಸವರಾಜ್ ಹೊರಟ್ಟಿ ಬೇಸರಗೊಂಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಎಲ್ಲರೂ ಪಕ್ಷ ಬಿಟ್ಟರೂ, ಆದರೂ ನಾನು ಪಕ್ಷ ಕಟ್ಟಿ, ಜೆಡಿಎಸ್ ನಲ್ಲಿ ಉಳಿದುಕೊಂಡೆ ಎಂದು ಆಪ್ತರಲ್ಲಿ ಬೇಸರವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
JDSದೇವೇಗೌಡcabinet expansionಸಂಪುಟ ವಿಸ್ತರಣೆBasavaraja horattiಬಸವರಾಜ ಹೊರಟ್ಟಿಜೆಡಿಎಸ್DevegowdaKarnataka politics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


