ಸಂಪುಟ ವಿಸ್ತರಣೆ ಸಂಬಂಧ ಜೆಡಿಎಸ್- ಕಾಂಗ್ರೆಸ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಕುಮಾರ ಸ್ವಾಮಿ
ಸಚಿವ ಸಂಪುಟ ವಿಸ್ತರಣೆ ಸಂಬಂಧ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ...

Published On :
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸಂಬಂಧ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ನಮ್ಮ ಶಾಸಕರ ಜೊತೆ ಸಭೆ ನಡೆಸಿದ್ದೆವು, ಉತ್ತಮ ಆಡಳಿತ, ಪಕ್ಷದ ಮುಂದಿನ ಭವಿಷ್ಯ ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ನಮ್ಮ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ನಮ್ಮ ಮುಂದಿನ ಸಂಪುಟಕ್ಕೆ ಸಚಿವರನ್ನು ಆಯ್ಕೆ ಮಾಡಲು ಪಕ್ಷದ ರಾಜ್ಯಾಧ್ಯಕ್ಷರಿಗೆ ಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ ಎಂದು ಕುಮಾರ ಸ್ವಾಮಿ ತಿಳಿಸಿದ್ದಾರೆ.
ನೀರಾವರಿ, ಆರೋಗ್ಯ, ಕೃಷಿ ಹಾಗೂ ಗೃಹ ಖಾತೆ ಸೇರಿದಂತೆ 22 ಖಾತೆಗಳು ಕಾಂಗ್ರೆಸ್ ಪಾಲಾಗಿವೆ. ಹಣಕಾಸು, ಅಬಕಾರಿ, ಲೋಕೋಪಯೋಗಿ ಇಲಾಖೆ ಸೇರಿದಂತೆ 12 ಇಲಾಖೆಗಳು ಜೆಡಿಎಸ್ ಗೆ ಸಿಕ್ಕಿವೆ,
ಸಮ್ಮಿ ಶ್ರ ಸರ್ಕಾರ ಯಾವುದೇ ತೊಂದರೆಯಿಲ್ಲದಂತೆ ನಡೆದುಕೊಂಡು ಹೋಗಲು ಸಮನ್ವಯ ಸಮಿತಿ ರಚಿಸಲಾಗುವುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
cabinet expansionಸಂಪುಟ ವಿಸ್ತರಣೆಭಿನ್ನಾಭಿಪ್ರಾಯಎಚ್.ಡಿ ಕುಮಾರ ಸ್ವಾಮಿH.D Kumara swamyDissensionKarnataka politicsಕರ್ನಾಟಕ ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


