ಕೇಂದ್ರದ ಸಾಧನೆಗಳ ಬಗ್ಗೆ ಪೇಜಾವರ ಶ್ರೀಗಳಿಗೆ ತಿಳವಳಿಕೆಯ ಕೊರತೆಯಿದೆ: ಶೋಭಾ ಕರಂದ್ಲಾಜೆ
: ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಪೇಜಾವರ ಶ್ರಿಗಳಿಗೆ ತಿಳುವಳಿಕೆಯ ಕೊರತೆ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ...

Published On :
ಮಂಗಳೂರು: ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಪೇಜಾವರ ಶ್ರಿಗಳಿಗೆ ತಿಳುವಳಿಕೆಯ ಕೊರತೆ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮಂಗಳೂರಿವಲ್ಲಿ ಮಾತನಾಡಿದ ಅವರು, ಶ್ರೀಗಳು ಸಂನ್ಯಾಸಿಗಳು, ಯಾವ ಆಧಾರದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ,ಮುಂದಿನ ದಿನಗಳಲ್ಲಿ ನಮ್ಮ ಪಕ್ಷದ ಹಿರಿಯರು ಕೇಂದ್ರ ಸರ್ಕಾರ ದೇಶದ ರಕ್ಷಣೆ ವಿಚಾರದಲ್ಲಿ, ವಿದೇಶದಲ್ಲಿ ಗೌರವ ಸಿಗುವ ರೀತಿ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಶ್ರೀಗಳಿಗೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದರು.
ನರೇಂದ್ರ ಮೋದಿಯವರ ಸರ್ಕಾರ ಹಲವು ಸಾಧನೆಗಳನ್ನು ಮಾಡಿದೆ. ಆದರೆ ನಿರೀಕ್ಷೆಯಷ್ಟು ಆಗಿಲ್ಲ. ಮುಂದಿನ 1 ವರ್ಷದೊಳಗೆ ಬಾಕಿ ಉಳಿದಿರುವ ಕೆಲಸಗಳನ್ನು ಮಾಡಿ ತೋರಿಸಬೇಕು ಎಂದು ಪೇಜಾವರ ಶ್ರೀಗಳು ಹೇಳಿಕೆ ನೀಡಿದ್ದರು. ಶ್ರೀಗಳ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Central Governmentಕೇಂದ್ರ ಸರ್ಕಾರShobha Karandlajeಶೋಭಾ ಕರಂದ್ಲಾಜೆKarnataka politicsಪೇಜಾವರ ಶ್ರೀಗಳುpajavar seer
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


