ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ, ದಿನೇಶ್ ಪಟ್ಟು: ಹೈಕಮಾಂಡ್ ಗೆ ಇಕ್ಕಟ್ಟು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆ ನೇಮಕ ವಿಚಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ನಾಯಕರಿಗೆ...

Published On :
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆ ನೇಮಕ ವಿಚಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.
ಮಂಗಳವಾರ ರಾಹುಲ್ ಗಾಂಧಿ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿದ್ದು, ಸಂಪುಟ ವಿಸ್ತರಣೆ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಂಬಂಧ ಚರ್ಚಿಸಲಿದ್ದಾರೆ.
ಒಂದು ವೇಳೆ ತಮಗೆ ಸಚಿವ ಸ್ಥಾನ ನೀಡದಿದ್ದರೇ ಕೆಪಿಸಿಸಿ ಅಧ್ಯಕ್ಷ ಹುದ್ದೆ ರೇಸ್ ನಲ್ಲಿರುವುದಾಗಿ ದಿನೇಶ್ ಗುಂಡೂರಾವ್ ಹೇಳಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ. ಒಬ್ಬರಿಗೆ ಒಂದೇ ಹುದ್ದೆ ಎಂಬ ರಾಹುಲ್ ಗಾಂಧಿ ಹೇಳಿಕೆಯಿಂದಾಗಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ತೀವ್ರ ನಿರಾಸೆಗೊಂಡಿದ್ದಾರೆ, ಆದರೆ ಸಚಿವ ಸಂಪುಟದ ಜೊತೆಗೆ ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Dinesh Gundu Raoದಿನೇಶ್ ಗುಂಡೂರಾವ್KPCC presidentD K Shivakumarಡಿಕೆ ಶಿವಕುಮಾರ್Karnataka politicsಕರ್ನಾಟಕ ರಾಜಕೀಯಕೆಪಿಸಿಸಿ ಅಧ್ಯಕ್ಷ ಸ್ಥಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


