ರಾಜಕೀಯ

ಕಾಂಗ್ರೆಸ್ ನ ಹಲವು ಹಿರಿಯ ನಾಯಕರಿಗಿಲ್ಲ ಸಚಿವ ಸ್ಥಾನ

ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ರಚನೆಯಲ್ಲಿ ಹಲವು ಕಾಂಗ್ರೆಸ್ ನ ಹಿರಿಯ ...

ಕಾಂಗ್ರೆಸ್ ನ ಹಲವು ಹಿರಿಯ ನಾಯಕರಿಗಿಲ್ಲ ಸಚಿವ ಸ್ಥಾನ
ವಿಧಾನಸೌಧದ ಗೇಟ್ ಮುಂದಿನ ದೃಶ್ಯ
Published On :

ಬೆಂಗಳೂರು: ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ರಚನೆಯಲ್ಲಿ ಹಲವು ಕಾಂಗ್ರೆಸ್ ನ ಹಿರಿಯ ಮುಖಂಡರು ಮತ್ತು ಮಾಜಿ ಸಚಿವರುಗಳನ್ನು ದೂರ ಇಡಲಾಗಿದೆ. ಪ್ರಮುಖ ಲಿಂಗಾಯತ ಮುಖಂಡ ಎಂ ಬಿ ಪಾಟೀಲ್, ಅಲ್ಪಸಂಖ್ಯಾತ ಮುಖಂಡ ರೋಷನ್ ಬೇಗ್, ಸತೀಶ್ ಜಾರಕಿಹೊಳಿ ಮೊದಲಾದವರು ಮಂತ್ರಿ ಸ್ಥಾನ ಗಿಟ್ಟಿಸುವಲ್ಲಿ ವಿಫಲರಾಗಿದ್ದಾರೆ.

ಕಾಂಗ್ರೆಸ್ ನಿಂದ ಡಿ ಕೆ ಶಿವಕುಮಾರ್, ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಜಯಮಾಲಾ, ಶಂಕರ್, ಆರ್ ವಿ ದೇಶಪಾಂಡೆ, ಪ್ರಿಯಾಂಕ ಖರ್ಗೆ, ಯು ಟಿ ಖಾದರ್, ಶಿವಾನಂದ್ ಪಾಟೀಲ್, ರಮೇಶ್ ಜಾರಕಿಹೊಳಿ, ಪುಟ್ಟರಂಗ ಶೆಟ್ಟಿ, ವೆಂಕಟರಮಣಪ್ಪ, ಶಿವಶಂಕರ್ ರೆಡ್ಡಿ ಮೊದಲಾದವರಿಗೆ ಸಚಿವ ಸ್ಥಾನದ ಭಾಗ್ಯ ಲಭಿಸಿದೆ. ಕಾಂಗ್ರೆಸ್ ನ ಪ್ರಮುಖ ಮುಖಂಡರಾದ ರಾಮಲಿಂಗಾ ರೆಡ್ಡಿ, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ರೋಶನ್ ಬೇಗ್ ಅವರಿಗೆ ಯಾವುದೇ ಸ್ಥಾನ ನೀಡಿಲ್ಲ.

ಜೆಡಿಎಸ್ ನಲ್ಲಿ ಹೆಚ್ ಡಿ ರೇವಣ್ಣ, ಜಿಟಿ ದೇವೇಗೌಡ, ಬಂಡೆಪ್ಪ ಕಾಶೆಂಪುರ್, ಎ ಮಹೇಶ್, ವೆಂಕಟ್ ರಾವ್ ನಾಡಗೌಡ, ಸಿ ಎಸ್ ಪುಟ್ಟರಾಜು, ಸಾರಾ ಮಹೇಶ್, ಹೆಚ್ ಕೆ ಕುಮಾರಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.