ಒಂದು ತಿಂಗಳಲ್ಲಿ ಸಚಿವರೊಬ್ಬರು ರಾಜಿನಾಮೆ ನೀಡ್ತಾರೆ: ಜೆಡಿಎಸ್ ಶಾಸಕ ಸತ್ಯನಾರಾಯಣ
ಕಾಂಗ್ರೆಸ್ - ಜೆಡಿಎಸ್ ಸಮಿಶ್ರ ಸರ್ಕಾರದ ಸಚಿವರೊಬ್ಬರು ಒಂದು ತಿಂಗಳಲ್ಲಿ ರಾಜಿನಾಮೆ ನೀಡಲಿದ್ದು, ಆ ಸ್ಥಾನವನ್ನು....

Published On :
ಬೆಂಗಳೂರು: ಕಾಂಗ್ರೆಸ್ - ಜೆಡಿಎಸ್ ಸಮಿಶ್ರ ಸರ್ಕಾರದ ಸಚಿವರೊಬ್ಬರು ಒಂದು ತಿಂಗಳಲ್ಲಿ ರಾಜಿನಾಮೆ ನೀಡಲಿದ್ದು, ಆ ಸ್ಥಾನವನ್ನು ನನಗೇ ನೀಡುವುದಾಗಿ ಜೆಡಿಎಸ್ ವರಿಷ್ಠರು ಭರವಸೆ ನೀಡಿದ್ದಾರೆ ಎಂದು ಸಚಿವ ಸ್ಥಾನ ವಂಚಿತ ಜೆಡಿಎಸ್ ಶಾಸಕ ಬಿ ಸತ್ಯನಾರಾಯಣ ಅವರು ಗುರುವಾರ ಹೇಳಿದ್ದಾರೆ.
ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ರಾಜಿನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದ ಶಿರಾ ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ, ಈಗ ತಮ್ಮ ನಿರ್ಧಾರವನ್ನು ಮುಂದೂಡಿದ್ದಾರೆ.
ಒಂದು ತಿಂಗಳಿನಲ್ಲಿ ಜೆಡಿಎಸ್ ಸಚಿವರೊಬ್ಬರು ರಾಜೀನಾಮೆ ನೀಡಲಿದ್ದಾರೆ. ಆ ಸ್ಥಾನವನ್ನು ನನಗೇ ನೀಡುವುದಾಗಿ ಜೆಡಿಎಸ್ ವರಿಷ್ಠರು ಭರವಸೆ ನೀಡಿದ್ದಾರೆ. ಹೀಗಾಗಿ ಒಂದು ತಿಂಗಳು ಕಾದು ನೋಡೋಣ ಎಂದು ಅವರು ಹೇಳಿದ್ದಾರೆ.
ರಾಜಿನಾಮೆ ಬೆದರಿಕೆ ಒಡ್ಡಿದ್ದ ಸತ್ಯನಾರಾಯಣ ಅವರ ಜತೆ ಜೆಡಿಎಸ್ ವರಿಷ್ಠರು ಮಾತುಕತೆ ನಡೆಸಿ ಮನವೊಲಿಸಿದ್ದಾರೆ.
ಕಳೆದ 10 ವರ್ಷಗಳಿಂದಲೂ ಅಧಿಕಾರವಿಲ್ಲದೆ ವಿರೋಧಪಕ್ಷದಲ್ಲಿದ್ದೆವು. ಈಗ ಮೈತ್ರಿಯಿಂದ ಅಧಿಕಾರ ಸಿಕ್ಕಿದ್ದು, ಅಧಿಕಾರ ಉಳಿಯಬೇಕು, ಮುಖ್ಯಮಂತ್ರಿಗಳ ಸ್ಥಾನ ಉಳಿಯಬೇಕು ಎಂದು ನಾಯಕರು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಸತ್ಯನಾರಾಯಣ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


