ಕಾಂಗ್ರೆಸ್ ನಲ್ಲಿ ಹೆಚ್ಚಿದ ಭಿನ್ನಮತ, ಜೂ.13 ರಂದು ಅತೃಪ್ತ ಶಾಸಕರ ಸಭೆ
ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಪಕ್ಷಕ್ಕೆ ಸೆಡ್ಡು ಹೊಡೆಯಲು ತೀರ್ಮಾನಿಸಿರುವುದು ವರಿಷ್ಠರಿಗೆ ತಲೆನೋವಾಗಿ ಪರಿಣಿಸಿದೆ.

Published On :
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಪಕ್ಷಕ್ಕೆ ಸೆಡ್ಡು ಹೊಡೆಯಲು ತೀರ್ಮಾನಿಸಿರುವುದು ವರಿಷ್ಠರಿಗೆ ತಲೆನೋವಾಗಿ ಪರಿಣಿಸಿದೆ.
ಸಂಪುಟದಲ್ಲಿ ಸ್ಥಾನ ವಂಚಿತ ಶಾಸಕರು ಪಕ್ಷದ ನಾಯಕರ ನಡೆಯನ್ನು ಬಹಿರಂಗವಾಗಿ ಟೀಕಿಸುತ್ತಿದ್ದು, ಹಿರಿತನ ಹಾಗೂ ಪಕ್ಷಕ್ಕಾಗಿ ಮಾಡಿದ ಸೇವೆಯನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸುತ್ತಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಜಮೀರ್ ಅಹ್ಮದ್ ಖಾನ್, ರಿಜ್ವಾನ್ ಅರ್ಷದ್ ಮತ್ತಿತರ ನಾಯಕರು ಅತೃಪ್ತ ನಾಯಕರನ್ನು ಭೇಟಿ ಮಾಡಲು ಮನವೊಲಿಸಲು ಯತ್ನಿಸಿದ್ದಾರೆ. ಆದರೆ, ಪಾಟೀಲ್ ಮತ್ತಿತರ ಶಾಸಕರು ಜೂನ್ 13 ರಂದು ಮತ್ತೆ ಸಭೆ ಸೇರಲಿದ್ದಾರೆ. ಈಶ್ವರ್ ಖಂಡ್ರೆ, ಶಾಮನೂರು ಶಿವಶಂಕರಪ್ಪ, ಕೂಡಾ ಅಸಮಾಧಾನಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


