ರಾಜಕೀಯ

ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ಅತೃಪ್ತ ಶಾಸಕ ಸತೀಶ್ ಜಾರಕಿಹೊಳಿ ರಾಜಿನಾಮೆ?

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಶಾಸಕರು ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ...

ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ಅತೃಪ್ತ ಶಾಸಕ ಸತೀಶ್ ಜಾರಕಿಹೊಳಿ ರಾಜಿನಾಮೆ?
ಸತೀಶ್ ಜಾರಕಿಹೊಳಿ
Published On :
ಬೆಳಗಾವಿ: ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹಲವು ಶಾಸಕರು ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ. 
ಇನ್ನು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು ಶೀರ್ಘವೇ ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ರಾಜಿನಾಮೆ ನೀಡುವುದಾಗಿ ಹೇಳಿದ್ದಾರೆ. ಜೂನ್ 11ರಂದು ಸಭೆ ನಡೆಸಿ ತಮ್ಮ ರಾಜಿನಾಮೆ ನೀಡುವ ಕುರಿತಂತೆ ತೀರ್ಮಾನ ಪ್ರಕಟಿಸುವುದಾಗಿ ಹೇಳಿದ್ದಾರೆ. 
ನನ್ನ ವಿರೋಧಿಗಳು ಬೆಂಗಳೂರು ಹಾಗೂ ದೆಹಲಿಯಲ್ಲೂ ಇದ್ದಾರೆ. ನನಗೆ ಬೇಕು ಅಂತಲೆ ಸಚಿವ ಸ್ಥಾನವನ್ನು ತಪ್ಪಿಸಿದ್ದಾರೆ. ನನಗೆ ಸಚಿವ ಸ್ಥಾನ ತಪ್ಪಿಸಿದವರು ಯಾರೆಂಬುದು ನನಗೆ ಗೊತ್ತು. ಅದನ್ನು ಇನ್ನು ಒಂದು ವಾರದಲ್ಲಿ ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ. 
ಸದ್ಯ ಕಾಂಗ್ರೆಸ್ ನಲ್ಲಿ ಅತೃಪ್ತ ಶಾಸಕರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಎಂಬಿ ಪಾಟೀಲ್ ನಂತರ ಇದೀಗ ಸತೀಶ್ ಜಾರಕಿಹೊಳಿ ಪಕ್ಷದ ವಿರುದ್ಧ ತಿರುಗಿಬಿದ್ದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.