ಹೌದು, ಸ್ವಲ್ಪ ಬೇಸರ ಇದೆ: ಎಂಬಿ ಪಾಟೀಲ್ ಭೇಟಿ ನಂತರ ಸಿಎಂ ಕುಮಾರಸ್ವಾಮಿ ಹೇಳಿಕೆ
ಕಾಂಗ್ರೆಸ್ ಪಕ್ಷದೊಳಗೆ ಕೆಲವು ನಾಯಕರಲ್ಲಿ ಭಿನ್ನಾಭಿಪ್ರಾಯ, ಅಸಮಾಧಾನ ಮತ್ತು ಒತ್ತಡ ಇರುವುದು ಹೌದು...

ಬೆಂಗಳೂರು: ಕಾಂಗ್ರೆಸ್ ಪಕ್ಷದೊಳಗೆ ಕೆಲವು ನಾಯಕರಲ್ಲಿ ಭಿನ್ನಾಭಿಪ್ರಾಯ, ಅಸಮಾಧಾನ ಮತ್ತು ಒತ್ತಡ ಇರುವುದು ಹೌದು, ಆದರೆ ಕಾಂಗ್ರೆಸ್ ಹೈಕಮಾಂಡ್ ಮತ್ತು ಹಿರಿಯ ಮುಖಂಡರು ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಹುದ್ದೆ ನೀಡಿದ ವಿಚಾರದಲ್ಲಿ ಮತ್ತೆ ಖಾತೆ ಹಂಚಿಕೆಯಲ್ಲಿ ಕಾಂಗ್ರೆಸ್ ನ ಕೆಲವು ನಾಯಕರಿಗೆ ಅಸಮಾಧಾನವಾಗಿದೆ. ಸಚಿವ ಸ್ಥಾನ ವಂಚಿತ ಶಾಸಕರು ತಮ್ಮ ಬೇಸರ, ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಇದು ನನಗೆ ಸಂಬಂಧ ಇಲ್ಲದಿರುವ ವಿಷಯವಾದರೂ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿರುವುದರಿಂದ ನನಗೂ ಜವಾಬ್ದಾರಿಯಿದೆ ಎಂದು ಹೇಳಿದರು.
ಸಂಪುಟ ರಚನೆಯಲ್ಲಿ ಎಲ್ಲಿ ಎಡವಿದ್ದೇವೆ, ಎಲ್ಲಿ ಸರಿಪಡಿಸಲು ಸಾಧ್ಯವಿದೆ ಎಂಬ ನನ್ನ ಅಭಿಪ್ರಾಯಗಳನ್ನು ನಾನು ಕಾಂಗ್ರೆಸ್ ನಾಯಕರಿಗೆ ತಲುಪಿಸುವೆ, ಆದರೆ ಕಾಂಗ್ರೆಸ್ ಪಕ್ಷದೊಳಗಿನ ತೀರ್ಮಾನಗಳನ್ನು ನಾನು ಸರಿಪಡಿಸಲು ಸಾಧ್ಯವಿಲ್ಲ. ಅದರ ಬಗ್ಗೆ ಅವರೇ ತೀರ್ಮಾನವನ್ನು ತೆಗೆದುಕೊಳ್ಳಬೇಕಿದೆ. ಸದ್ಯದಲ್ಲಿಯೇ ಎಲ್ಲ ಭಿನ್ನಾಭಿಪ್ರಾಯಗಳು ಬಗೆಹರಿಯುವ ವಿಶ್ವಾಸವಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಸಾಕಷ್ಟು ಕೊಡುಗೆ ನೀಡಿದೆ. ನನಗೆ ಅನ್ಯಾಯವಾಗಿದೆ ಎಂಬ ಭಾವನೆ ಎಂ ಬಿ ಪಾಟೀಲರಿಗೆ ಇದೆ. ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಸೌಜನ್ಯಕ್ಕೆ ಅವರನ್ನು ಭೇಟಿಯಾಗಿದ್ದೆ. ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯದ ಬಗ್ಗೆ ನಾನು ಮಾತನಾಡುವುದಿಲ್ಲ. ಪಾಟೀಲರ ಭಾವನೆಯನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ತಿಳಿಸುತ್ತೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


