ಖರ್ಗೆಯವರ ಬಗ್ಗೆ ಯಾವುದೇ ಅಸಮಾಧಾನವಿಲ್ಲ- ಎಂ. ಬಿ. ಪಾಟೀಲ್
ಸಚಿವ ಸಂಪುಟ ರಚನೆ ವಿಷಯದಲ್ಲಿ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ತಮ್ಮಗೆ ಯಾವುದೇ ಅಸಮಾಧಾನವಿಲ್ಲ ಎಂದು ಸಚಿವ ಸ್ಥಾನ ವಂಚಿತ ಶಾಸಕ ಎಂ. ಬಿ. ಪಾಟೀಲ್ ಹೇಳಿದ್ದಾರೆ.

ನವದೆಹಲಿ: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ರಚನೆ ವಿಷಯದಲ್ಲಿ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ತಮ್ಮಗೆ ಯಾವುದೇ ಅಸಮಾಧಾನವಿಲ್ಲ ಎಂದು ಸಚಿವ ಸ್ಥಾನ ವಂಚಿತ ಶಾಸಕ ಎಂ. ಬಿ. ಪಾಟೀಲ್ ಹೇಳಿದ್ದಾರೆ.
ದೆಹಲಿಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಎಲ್ಲಾ ಪರಿಸ್ಥಿತಿಯನ್ನು ಹೈಕಮಾಂಡ್ ಮುಂದೆ ಇಟ್ಟಿದ್ದೇನೆ, ಆದರೆ, ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದರು.
ನಾನು ಒಬ್ಬಂಟಿಯಲ್ಲ, ಹಲವು ಶಾಸಕರು ತಮ್ಮ ಜೊತೆಯಲ್ಲಿದ್ದು, ಶೀಘ್ರದಲ್ಲಿಯೇ ಮತ್ತೊಂದು ಸಭೆ ನಡೆಸಿ ಮುಂದಿನ ನಡೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಂ. ಬಿ. ಪಾಟೀಲ್ ತಿಳಿಸಿದರು.
ಈ ಮಧ್ಯೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ,ಗೃಹ ಖಾತೆ ಸಿಗದೆ ಅಸಮಾಧಾನಗೊಂಡಿರುವವರು ದೂರು ಸಲ್ಲಿಸಿದ್ದು, ಪಕ್ಷ ನಿಷ್ಠರಾಗಿರಬೇಕಾಗುತ್ತದೆ. ಅನ್ಯಾಯವಾದ ಪಕ್ಷದಲ್ಲಿ ಅದನ್ನು ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಸಂವಿಧಾನ, ಪ್ರಜಾಪ್ರಭುತ್ವವನ್ನು ರಕ್ಷಿಸಲು ಕೆಲವು ವೇಳೆ ತ್ಯಾಗ ಮಾಡಬೇಕಾಗುತ್ತದೆ. ಕೆಲ ಶಾಸಕರು ಅಸಮಾಧಾನಗೊಂಡಿದ್ದು, ಹೈಕಮಾಂಡ್ ಹಾಗೂ ಅದರ ಪ್ರತಿನಿಧಿಗಳು ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ನಿರ್ಧಾರದ ಬಗ್ಗೆ ಅವರಿಗೂ ಅರ್ಥವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


