ರಾಜಕೀಯ

ಖಾತೆ ಹಂಚಿಕೆಯಲ್ಲಿ ನಮಗೆ ಅನ್ಯಾಯವಾಗಿದ್ದು ಅದನ್ನು ಸರಿಪಡಿಸಬೇಕಿದೆ: ಮಲ್ಲಿಕಾರ್ಜುನ ಖರ್ಗೆ

ಸಚಿವರಿಗೆ ಖಾತೆ ಹಂಚಿಕೆಯಲ್ಲಿ ಕಾಂಗ್ರೆಸ್ ಗೆ ಅನ್ಯಾಯವಾಗಿದ್ದು ಅದನ್ನು ಸರಿಪಡಿಸಬೇಕಾಗಿದೆ ...

ಖಾತೆ ಹಂಚಿಕೆಯಲ್ಲಿ ನಮಗೆ ಅನ್ಯಾಯವಾಗಿದ್ದು ಅದನ್ನು ಸರಿಪಡಿಸಬೇಕಿದೆ: ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Published On :

ಬೆಂಗಳೂರು: ಸಚಿವರಿಗೆ ಖಾತೆ ಹಂಚಿಕೆಯಲ್ಲಿ ಕಾಂಗ್ರೆಸ್ ಗೆ ಅನ್ಯಾಯವಾಗಿದ್ದು ಅದನ್ನು ಸರಿಪಡಿಸಬೇಕಾಗಿದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷಗಳ ಶಾಸಕರುಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕಾಗಿದೆ. ಗೃಹ ಖಾತೆ ಸಿಗದಿರುವುದರಿಂದ ಬೇಸರಗೊಂಡಿರುವ ನಾಯಕರು ಪಕ್ಷಕ್ಕೆ ನಿಷ್ಠಾವಂತರಾಗಿ ಉಳಿಯಲಿದ್ದು ಪಕ್ಷವನ್ನು ತೊರೆಯುವ ಯಾವುದೇ ಉದ್ದೇಶ ಅವರಲ್ಲಿಲ್ಲ. ಆದರೆ ಖಾತೆ ಹಂಚಿಕೆಯಲ್ಲಿ ಆಗಿರುವ ಅನ್ಯಾಯವನ್ನು ಕೂಡಲೇ ಸರಿಪಡಿಸಬೇಕಿದೆ ಎಂದರು.

ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು ನಾವು ಕೆಲವೊಮ್ಮೆ ತ್ಯಾಗಗಳನ್ನು ಮಾಡಬೇಕಾಗುತ್ತದೆ. ಕೆಲವು ಶಾಸಕರು ಅಸಮಾಧಾನಗೊಂಡಿದ್ದು ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮತ್ತು ಅವರ ಪ್ರತಿನಿಧಿಗಳು ಅತೃಪ್ತರೊಂದಿಗೆ ಮಾತನಾಡಲಿದ್ದಾರೆ. ಈ ನಿರ್ಧಾರದ ಹಿಂದಿನ ಕಾರಣಗಳು ಕೂಡ ಅವರಿಗೆ ತಿಳಿದಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.