ರಾಜಕೀಯ

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.91.84 ಮತದಾನ

ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರ ಕ್ಷೇತ್ರಗಳ ಆರು ವಿಧಾನಪರಿಷತ್ ಕ್ಷೇತ್ರಗಳಿಗೆ ...

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.91.84 ಮತದಾನ
ಬೆಂಗಳೂರಿನ ವಿವಿ ಪುರಂ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ ಕೇಂದ್ರ ಸಚಿವ ಅನಂತ್ ಕುಮಾರ್ ಮತ್ತು ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್
Published On :

ಬೆಂಗಳೂರು: ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರ ಕ್ಷೇತ್ರಗಳ ಆರು ವಿಧಾನಪರಿಷತ್ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆಗೆ ಮತದಾನ ನಡೆದಿದ್ದು ಇದೇ 12ರಂದು ಫಲಿತಾಂಶ ಪ್ರಕಟವಾಗಲಿದೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಅತಿ ಹೆಚ್ಚು ಶೇಕಡಾ 91.84ರಷ್ಟು ಮತದಾನವಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಶೇಕಡಾ 64.11ರಷ್ಟು, ದಕ್ಷಿಣ ಶಿಕ್ಷಕರ ಪದವೀಧನ ಕ್ಷೇತ್ರದಲ್ಲಿ ಶೇಕಡಾ 79.91ರಷ್ಟು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಶೇಕಡಾ 80.45ರಷ್ಟು ಮತದಾನವಾಗಿದೆ. ನೈರುತ್ಯ ಪದವೀಧರ ಕ್ಷೇತ್ರದಿಂದ ಶೇಕಡಾ 70.4 ಮತ್ತು ಈಶಾನ್ಯ ಕ್ಷೇತ್ರದಲ್ಲಿ ಶೇಕಡಾ 70.13ರಷ್ಟು ಮತದಾನ ನಡೆದಿದೆ.

ಎಲ್ಲಾ ಆರು ಕ್ಷೇತ್ರಗಳಲ್ಲಿ ಮೂವರು ವಿಧಾನಪರಿಷತ್ ಸದಸ್ಯರು ಸೇರಿದಂತೆ 75 ಮಂದಿ ಸ್ಪರ್ಧಾ ಕಣದಲ್ಲಿದ್ದರು. ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ನ ರಮೇಶ್ ಬಾಬು , ಮರಿತಿಬ್ಬೇ ಗೌಡ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯಿಂದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಸ್ಪರ್ಧೆಯಲ್ಲಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ 22 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.