ಕಾಂಗ್ರೆಸ್ , ಜೆಡಿಎಸ್ ನ ಹಲವು ಶಾಸಕರು ಬಿಜೆಪಿ ಸೇರಲು ಆಸಕ್ತಿ - ಬಿ.ಎಸ್. ಯಡಿಯೂರಪ್ಪ
ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಹಲವು ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಹಲವು ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರ ಅಸಮಾಧಾನ ಕುರಿತು ಮಾತನಾಡಿದ ಯಡಿಯೂರಪ್ಪ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಹಲವು ಯುವ ನಾಯಕರು ಬಿಜೆಪಿ ಸೇರುವ ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಆತೃಪ್ತ ಶಾಸಕರು ಬಿಜೆಪಿ ಸೇರಿದ್ದರೆ ಅವರ ಇಷ್ಟದಂತೆ ಕ್ಷೇತ್ರವನ್ನು ಅಭಿವೃದ್ದಿಪಡಿಸಲಾಗುವುದು.ಅಂತಹವರು ಬಿಜೆಪಿ ಸೇರುವುದರಿಂದ ಪಕ್ಷ ಮತ್ತಷ್ಟು ಸದೃಢಗೊಳ್ಳಲಿದೆ ಎಂದರು.
ಸಮಿಶ್ರ ಸರ್ಕಾರ ಎಷ್ಟು ದಿನ ಉಳಿಯಲಿದೆ ಎಂಬುದು ಗೊತ್ತಿಲ್ಲ. 104 ಸದಸ್ಯರು ಉತ್ತಮ ಕೆಲಸ ಮಾಡುವ ಮೂಲಕ ಯಶಸ್ವಿ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಬೇಕು, ಮುಂದಿನ ವರ್ಷದ ಲೋಕಸಭಾ ಚುನಾವಣೆಗೆ ಸಿದ್ಧರಾಗುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


