ರಾಜಕೀಯ

ನಾನು ಎಲ್ಲಾ ಶಾಸಕರೊಂದಿಗೆ ಸಂಪರ್ಕದಲ್ಲಿದ್ದು ಸಮಸ್ಯೆ ಬಗೆಹರಿದಿದೆ: ಡಿ ಕೆ ಶಿವಕುಮಾರ್

ಪಕ್ಷದ ಕೆಲವು ನಾಯಕರಲ್ಲಿ ಇದ್ದ ಅಸಮಾಧಾನ ಶಮನಗೊಂಡಿವೆ. ನಾವು ಎಲ್ಲಾ ಸಮಸ್ಯೆಗಳನ್ನು ...

ನಾನು ಎಲ್ಲಾ ಶಾಸಕರೊಂದಿಗೆ ಸಂಪರ್ಕದಲ್ಲಿದ್ದು ಸಮಸ್ಯೆ ಬಗೆಹರಿದಿದೆ: ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್
Published On :

ಬೆಂಗಳೂರು: ಪಕ್ಷದ ಕೆಲವು ನಾಯಕರಲ್ಲಿ ಇದ್ದ ಅಸಮಾಧಾನ ಶಮನಗೊಂಡಿವೆ. ನಾವು ಎಲ್ಲಾ ಸಮಸ್ಯೆಗಳನ್ನು ಕುಳಿತು ಮಾತುಕತೆ ನಡೆಸಿ ಬಗೆಹರಿಸಿದ್ದೇವೆ ಎಂದು ಜಲಸಂಪನ್ಮೂಲ ಖಾತೆ ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನ ಎಲ್ಲಾ ಅತೃಪ್ತ ಶಾಸಕರ ಜೊತೆ ಸಂಪರ್ಕದಲ್ಲಿದ್ದೇನೆ. ಸರ್ಕಾರ ಸರಿಯಾಗಿಯೇ ಮುಂದುವರಿಯಲಿದೆ, ಏನೂ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದರು,

ಕಾಂಗ್ರೆಸ್ ಮತ್ತು ಜೆಡಿಎಸ್ ನ ಕೆಲವು ಅತೃಪ್ತ ಶಾಸಕರು ಬಿಜೆಪಿ ಸೇರಲು ಇಚ್ಛಿಸುತ್ತಿದ್ದಾರೆ ಎಂಬ ಬಿ ಎಸ್ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪನವರು ತಮ್ಮ ಸೋಲನ್ನು ಒಪ್ಪಿಕೊಳ್ಳಬೇಕು, ಕರ್ನಾಟಕದ ಜನತೆ ಅವರ ಪರವಾಗಿ ಚುನಾವಣೆಯಲ್ಲಿ ತೀರ್ಪು ನೀಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿನ ಕೆಲವು ನಾಯಕರಲ್ಲಿದ್ದ ಭಿನ್ನಾಭಿಪ್ರಾಯ ಕೊನೆಯಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.