ರಾಜಕೀಯ

ಹೈಕಮಾಂಡ್‌ ಜತೆ ಚರ್ಚಿಸಿ ಭಿನ್ನಮತ ಶಮನ: ಸಿದ್ದರಾಮಯ್ಯ

ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದಲ್ಲಿ ಕಾಣಿಸಿಕೊಂಡಿರುವ...

ಹೈಕಮಾಂಡ್‌ ಜತೆ ಚರ್ಚಿಸಿ ಭಿನ್ನಮತ ಶಮನ: ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :
ಬಾಗಲಕೋಟೆ: ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದಲ್ಲಿ ಕಾಣಿಸಿಕೊಂಡಿರುವ ಭಿನ್ನಮತ ಕುರಿತು ಹೈಕಮಾಂಡ್ ಜತೆ ಚರ್ಚಿಸಿ, ಪರಿಹರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.
ಇಂದು ಬಾಗಲಕೋಟೆ ಜಿಲ್ಲೆಯ ನೀಲಗುಂದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಭಿನ್ನಮತೀಯ ಶಾಸಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ದಿನಕ್ಕೆ ಮೂರು ಬಾರಿ ಫೋನ್‌ ಮೂಲಕ ಮಾತನಾಡಿದ್ದೇನೆ. ಎಲ್ಲರೂ ಸಮಾಧಾನ ಆಗಿದ್ದು, ಯಾವುದೇ ಅತೃಪ್ತಿ ಇಲ್ಲ ಎಂದರು.
ಈಗ ಸಚಿವರಾಗಿರುವವರಿಗೆ ಎರಡು ವರ್ಷ ಅವಧಿಗೆ ಅವಕಾಶ ನೀಡಿದ್ದೇವೆ. ಮುಂದಿನ ಅವಧಿಗೆ ಉಳಿದವರಿಗೆ ಸಚಿವ ಸ್ಥಾನ ನೀಡಿ ಸಮಾಧಾನಪಡಿಸುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಹೈಕಮಾಂಡ್ ನಿಂದ ದೆಹಲಿ ಬರುವಂತೆ ನನಗೆ ಯಾವುದೇ ಬುಲಾವ್ ಬಂದಿಲ್ಲ. ಹಾಗಾಗಿ ನಾನು ದೆಹಲಿಗೆ ಹೋಗಿಲ್ಲ. ದೂರವಾಣಿ ಮೂಲಕವೇ ಹೈಕಮಾಂಡ್ ಜೊತೆ ಮಾತನಾಡುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.