ಸಮ್ಮಿಶ್ರ ಸರ್ಕಾರದಲ್ಲಿ ತಾನು ಮುಖ್ಯಮಂತ್ರಿ ಆದ ರಹಸ್ಯ ಬಿಚ್ಚಿಟ್ಟ ಕುಮಾರಸ್ವಾಮಿ
ಮುಖ್ಯಮಂತ್ರಿ ಆಗೋದಕ್ಕೆ ನನಗೆ ಇಷ್ಟವಿರಲಿಲ್ಲ. ಆದರೆ ಕಾಂಗ್ರೆಸ್ಸಿಗರು ನನ್ನನ್ನು ಬಿಡಲಿಲ್ಲ ಎಂದು ಸಮ್ಮಿಶ್ರ ಸರ್ಕಾರ ರಚನೆ ಕುರಿತ ರಹಸ್ಯವನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ...

Published On :
ಬೆಂಗಳೂರು: ಮುಖ್ಯಮಂತ್ರಿ ಆಗೋದಕ್ಕೆ ನನಗೆ ಇಷ್ಟವಿರಲಿಲ್ಲ. ಆದರೆ ಕಾಂಗ್ರೆಸ್ಸಿಗರು ನನ್ನನ್ನು ಬಿಡಲಿಲ್ಲ ಎಂದು ಸಮ್ಮಿಶ್ರ ಸರ್ಕಾರ ರಚನೆ ಕುರಿತ ರಹಸ್ಯವನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ನನ್ನ ತಂದೆ ಮಾಜಿ ಪ್ರಧಾನಿ ದೇವೇಗೌಡ ಅವರು ನನ್ನ ಮಗನಿಗೆ ಎರಡು ಬಾರಿ ಚಿಕಿತ್ಸೆ ಆಗಿದೆ. ಆರೋಗ್ಯ ಸರಿಯಿಲ್ಲ. ಆದ್ದರಿಂದ ನೀವೇ ಯಾರಾದರೂ ಮುಖ್ಯಮಂತ್ರಿ ಆಗಿ ಎಂದು ಕಾಂಗ್ರೆಸ್ಸಿಗರಿಗೆ ಮನವಿ ಮಾಡಿದ್ದರು. ಆಗ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ದೆಹಲಿ ನಾಯಕರು ನೀವೇ ಮುಖ್ಯಮಂತ್ರಿ ಆಗಬೇಕು ಎಂದು ಒತ್ತಾಯ ಮಾಡಿ ನನ್ನನ್ನು ಸಿಎಂ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಗಾಂಧಿಭವನದಲ್ಲಿ ನಡೆದ ಕಾರ್ಯಕ್ರಮದ ವೇಳೆ ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಕೊಟ್ಟಿರುವ ಅಧಿಕಾರವನ್ನು ನಡೆಸುತ್ತೇನೆ. ನನಗೆ ಹಣ ಮಾಡುವ ಉದ್ದೇಶ ಇಲ್ಲ. ನನಗೆ ಎರಡು ಬಾರಿ ಚಿಕಿತ್ಸೆ ಆಗಿದೆ ಎಷ್ಟು ದಿನ ಬದುಕುತ್ತೇನೆ ನನಗೆ ಗೊತ್ತಿಲ್ಲ. ಇಂದು ದೇವರ ಅನುಗ್ರಹದಿಂದ ಈ ಜಾಗದಲ್ಲಿ ಕುಳಿತಿದ್ದೇನೆ. ಗಾಂಧಿಜೀಯವರ ಹೆಸರನ್ನು ಉಳಿಸುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್JDSKarnatakaಕರ್ನಾಟಕಜೆಡಿಎಸ್HD Kumaraswamyಹೆಚ್ ಡಿ ಕುಮಾರಸ್ವಾಮಿKarnataka politicsಕರ್ನಾಟಕ ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


