ಹಣ ಮತ್ತು ಜಾತಿ ರಾಜಕೀಯದಿಂದಾಗಿ ನನ್ನ ತಂದೆ ಚಾಮುಂಡೇಶ್ವರಿಯಲ್ಲಿ ಸೋತರು: ಡಾ ಯತೀಂದ್ರ
ಹಣದ ಪ್ರಾಬಲ್ಯ ಮತ್ತು ಜಾತಿ ರಾಜಕೀಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ತಂದೆ ...

ಮೈಸೂರು: ಹಣದ ಪ್ರಾಬಲ್ಯ ಮತ್ತು ಜಾತಿ ರಾಜಕೀಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ತಂದೆ ಸಿದ್ದರಾಮಯ್ಯನವರ ಸೋಲಿಗೆ ಕಾರಣವಾಯಿತು ಎಂದು ವರುಣಾ ಕ್ಷೇತ್ರದ ಶಾಸಕ ಡಾ ಯತೀಂದ್ರ ಹೇಳಿದ್ದಾರೆ.
ಕಾಂಗ್ರೆಸ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿರೋಧ ಪಕ್ಷಗಳ ಹಣದ ಪ್ರಭಾವ ಮತ್ತು ಜಾತಿ ರಾಜಕೀಯ ನನ್ನ ತಂದೆಯವರ ಸೋಲಿಗೆ ಎರಡು ಮುಖ್ಯ ಕಾರಣಗಳು. ಆದರೆ ಬಾದಾಮಿ ಕ್ಷೇತ್ರದ ಜನತೆ ಸಿದ್ದರಾಮಯ್ಯನವರನ್ನು ಕೈಬಿಡಲಿಲ್ಲ. ಬಾದಾಮಿ ಜನತೆ ನನ್ನ ತಂದೆಯನ್ನು ಬೆಂಬಲಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆ ಹೇಳುತ್ತೇನೆ ಎಂದರು.
ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಿರಿಯ ಪುತ್ರ ಡಾ ಯತೀಂದ್ರ ವರುಣಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


